ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ ಅಧ್ಯಕ್ಷರಾಗಿ ಶ್ರೀಕಾಂತ್ ಬಗೇರಾ: ಎಲ್ಲರಿಗೂ ಧನ್ಯವಾದ ಅರ್ಪಿಸಿದ ನಿರ್ಗಮಿತ ಅಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ

On: March 19, 2024 2:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-03-2024

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗೇರಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕೆಪಿಸಿಸಿ ಸಂಹವನ ಮತ್ತು ಸಾಮಾಜಿಕ ಜಾಲತಾಣದ ಚೇರ್ಮನ್ ಪ್ರಿಯಾಂಕ ಖರ್ಗೆ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಅವರ ಆದೇಶ ಮೇರೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಮಿತಿಗೆ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಬಗರೆ ಅವರನ್ನು ನೇಮಿಸಲಾಗಿದೆ.

ಉಪಾಧ್ಯಕ್ಷರಾಗಿ ಎಂ. ಗೋವಿಂದ್, ಎನ್. ಸಿದ್ದೇಶ್‌, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್, ವಾಮದೇವ್, ರಮೇಶ್ ಸರ್ಕಾರ, ಮೊಹಮದ್ ಫುರ್ಕಾನ್, ರಮೇಶ್ ಅವರನ್ನು ನಿಯೋಜಿಸಲಾಗಿದೆ.

ಕೆ. ಎಲ್. ಹರೀಶ್ ಬಸಾಪುರ ಧನ್ಯವಾದ:

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ್ದ ನಾಯಕರಿಗೂ, ಸಹಕರಿಸಿದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೂ ಧನ್ಯವಾದಗಳು ಎಂದು ನಿರ್ಗಮಿತ ಅಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ವಿಭಾಗ ಪ್ರಾರಂಭಿಸಿದಾಗ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಯುವಕರನ್ನು ಗುರುತಿಸಿ ಅವರಿಗೆ ಅವಕಾಶ ನೀಡಿದ ಸಂದರ್ಭದಲ್ಲಿ, ನನ್ನನ್ನು ಸಾಮಾಜಿಕ ಜಾಲತಾಣ ವಿಭಾಗದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಪರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದೀರಿ. ಪಕ್ಷ ನೀಡಿದ ಕೆಲಸವನ್ನು ನಾನು ನನ್ನ ಶಕ್ತಿ ಮೀರಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದ ಜಿಲ್ಲಾ ಉಪಾಧ್ಯಕ್ಷನಾಗಿ, ರಾಜ್ಯ ಸಮಿತಿ ಸದಸ್ಯನಾಗಿ, ರಾಜ್ಯ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ತದನಂತರ ಪಕ್ಷದ ಮುಖಂಡರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷನಾಗಿಯೂ ಇಲ್ಲಿಯವರೆಗೂ ಕಾರ್ಯ ನಿರ್ವಹಿಸಿದ್ದು, ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಇತ್ತೀಚೆಗೆ ನನ್ನ ಜಿಲ್ಲಾಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದೆನು ಎಂದು ಮಾಹಿತಿ ನೀಡಿದ್ದಾರೆ.

ಪಕ್ಷವೂ ಇಂದು ಜಿಲ್ಲಾ ಸಾಮಾಜಿಕ ಜಾಲತಾಣದ ನೂತನ ಜಿಲ್ಲಾಧ್ಯಕ್ಷರಾಗಿ ಸ್ನೇಹಿತ ಶ್ರೀಕಾಂತ್ ಬಗೇರಾರನ್ನು ನೇಮಿಸಿದ್ದು, ಅವರನ್ನು ಅಭಿನಂದಿಸುತ್ತಾ ನನಗೆ ಇಲ್ಲಿಯವರೆಗೆ ನೀಡಿದ ಸಹಕಾರವನ್ನು ಎಲ್ಲರೂ ಅವರಿಗೂ ಸಹ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನನ್ನನ್ನು ಗುರುತಿಸಿ ಅವಕಾಶ ನೀಡಿದ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment