ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಸರಾ ಉದ್ಘಾಟಕರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನಲು ಆಗದು: ಸಿಎಂ ಸಿದ್ದರಾಮಯ್ಯ!

On: September 2, 2025 11:56 AM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/ DAVANAGERE/DATE:02_09_2025

ಮೈಸೂರು: ಲೇಖಕಿ ಬಾನು ಮುಷ್ಕಾಕ್ ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಅವರು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ ಎಂದು ತಿಳಿಸಿದ್ದಾರೆ.

READ ALSO THIS STORY: ಮಸೀದಿ ಪಕ್ಕದಲ್ಲೇ ಗಣಪತಿ ಇಟ್ಟು ಕೇಕೆ ಹೊಡೆಯಬೇಕಾ, ತಣ್ಣಗಿರದಿದ್ರೆ ಒಳಗೆ ಹಾಕಿಸ್ತೇನೆ: ಎಸ್. ಎಸ್. ಮಲ್ಲಿಕಾರ್ಜುನ್ ಗರಂ!

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ , ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು.

ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ ಯಾರ ಪರ ಇದ್ದಾರೆ?

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬದವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ ಎಂದು ಹೇಳಿದರು.

ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ ಮತ್ತೊಂದು ಕಡೆ ಸೌಜನ್ಯ ಪರ ಇರುವುದಾಗಿ ಹೇಳುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment