Home ದಾವಣಗೆರೆ ಬಿಜೆಪಿ, ಜೆಡಿಎಸ್‌ನಲ್ಲಿ ಇಲ್ವಾ ಕುಟುಂಬ ರಾಜಕಾರಣ? ಯಡಿಯೂರಪ್ಪ, ದೇವೇಗೌಡರ ಮಕ್ಕಳ ಪಟ್ಟಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ ಗರಂ
ದಾವಣಗೆರೆಬೆಂಗಳೂರು

ಬಿಜೆಪಿ, ಜೆಡಿಎಸ್‌ನಲ್ಲಿ ಇಲ್ವಾ ಕುಟುಂಬ ರಾಜಕಾರಣ? ಯಡಿಯೂರಪ್ಪ, ದೇವೇಗೌಡರ ಮಕ್ಕಳ ಪಟ್ಟಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ ಗರಂ

Share
ಸಿದ್ದರಾಮಯ್ಯ
Share

ದಾವಣಗೆರೆ: ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ವಾ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಮಕ್ಕಳು, ಮೊಮ್ಮಕ್ಕಳು ಅಧಿಕಾರ ಅನುಭವಿಸಿಲ್ವಾ, ಈಗ ಅನುಭವಿಸ್ತಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಮಕ್ಕಳಾದ ಹೆಚ್. ಡಿ. ಕುಮಾರಸ್ವಾಮಿ, ಹೆಚ್. ಡಿ. ರೇವಣ್ಣ, ಮೊಮ್ಮಕ್ಕಳಾದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ, ಅಳಿಯ ಸಂಸದರಾಗಿಲ್ವ.
ಕೇವಲ ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತದೆ ಎಂಬ ಆರೋಪ ಮಾಡುವವರಿಗೆ ಬುದ್ದಿ ಇದೆಯಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುವ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಮತ್ತು ದೇವೇಗೌಡರ ಕುಟುಂಬಗಳನ್ನು ಉಲ್ಲೇಖಿಸಿದರು. ಜೆಡಿಎಸ್ ಹಾಗೂ ಬಿಜೆಪಿಯವರು ಕುಟುಂಬ ರಾಜಕಾರಣದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲಿ ಸಕ್ರಿಯವಾಗಿರುವುದನ್ನು ಕಾಣಬಹುದು ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *