SUDDIKSHANA KANNADA NEWS/ DAVANAGERE/ DATE:07-07-2023
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. 14 ನೇ ಆಯವ್ಯಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಸರ್ವರನ್ನೂ ಮೆಚ್ಚಿಸುವ ಪ್ರಯತ್ನ ಮಾಡಿದ್ದಾರೆ. ಚುನಾವಣಾ ಪೂರ್ವ ನೀಡಿದ್ದ ಪಂಚ ಭಾಗ್ಯ ಅಂದರೆ ಐದು ಗ್ಯಾರಂಟಿಗಳ ಯೋಜನೆಗೆ ಹಣ ಮೀಸಲಿಟ್ಟಿದ್ದಾರೆ. ರೈತರಿಗೆ ಬಂಪರ್ ಕೊಡುಗೆ ನೀಡಿದ್ದು, ಉಳಿದಂತೆ ಏನೆಲ್ಲಾ ನೀಡಿದ್ದಾರೆ ನೋಡೋಣ ಬನ್ನಿ.
ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಸಹಿತ ಕೃಷಿ ಸಂಬಂಧಿತ ಇಲಾಖೆಗಳಿಗೆ ನೀಡಿರುವ ಯೋಜನೆ, ಅನುದಾನ ಕೂಡ ಕೊಟ್ಟಿದ್ದಾರೆ.
ತಮ್ಮ ಆಯ್ಯವ್ಯಯದಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡುವುದಾಗಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ಧರಾಮಯ್ಯ(Siddaramaiah), ರೈತರಿಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದೆ. ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು. ತೆಂಗು, ಅಡಕೆ, ದ್ರಾಕ್ಷಿ ದಾಳಿಂಬೆ ಬೆಳೆ ಸಂಸ್ಕರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಅದೇ ರೀತಿ 75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು. ಜಾನುವಾರುಗಳ(ಹಸು, ಎಮ್ಮೆ) ಆಕಸ್ಮಿಕ ಸಾವುಗಳಿಗೆ 10 ಸಾವಿರ ಪರಿಹಾರ. ಕುರಿ, ಮೇಕೆ ಸಾವನ್ನಪ್ಪಿದರೆ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ.
ಚಿಕ್ಕಮಗಳೂರು ಕೊಡಗಿನ ಕಾಫಿ ಎಕೋ ಟೂರಿಸಂ ಉತ್ತೇಜಿಸಲು ಕರ್ನಾಟಕದ ಕಾಫಿ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು. ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ, ಬ್ರಾಂಡಿಂಗ್‌ಗೆ ನೂತನ ಕಾರ್ಯಕ್ರಮ ಜಾರಿ ಮಾಡಲಾಗುವುದು.
ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ
ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.
ಜನತೆಯೇ ನನ್ನ ಪಾಲಿನ ಜನಾರ್ದನರು:
14ನೇ ಬಾರಿ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 3 ಲಕ್ಷ 27 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. 5 ಗ್ಯಾರೆಂಟಿ ಯೋಜನೆಗೆ 52,000 ಕೋಟಿ ರೂಪಾಯಿ, ನಮ್ಮ ಮೆಟ್ರೋಗೆ 30 ಸಾವಿರ ಕೋಟಿ
ರೂಪಾಯಿ, ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ 10 ಕೋಟಿ ರೂಪಾಯಿ, ಅನುಗ್ರಹ ಯೋಜನೆ ಮರು ಜಾರಿ75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ, ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಜನರು ಬುದ್ಧಿವಂತರು:
ಜನರು ಪ್ರಜ್ಞಾವಂತರು. ವಿಪಕ್ಷಗಳ ತರ್ಕರಹಿತ ಆಲೋಚನೆಗಳನ್ನು ನಂಬುವುದಿಲ್ಲ. ವಾಸ್ತವವೆಂದರೆ, ಜನ ನಿಮ್ಮಿಂದ ಬೇಸತ್ತು ಇಷ್ಟೊಂದು ಭಾರಿ ಬಹುಮತದಿಂದ ನಮ್ಮನ್ನು ಆರಿಸಿ ವಿಧಾನಸೌಧಕ್ಕೆ ಕಳುಹಿಸಿದ್ದಾರೆ. 70 ಕೋಟಿ ರೂಪಾಯಿ
ವೆಚ್ಚದಲ್ಲಿ ಕಲಬುರಗಿಯಲ್ಲಿ ತಾಯಿ-ಮಗು ಆಸ್ಪತ್ರೆ, ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು, ಕೊಪ್ಪಳ, ಕಾರವಾರ ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ, ಮೈಸೂರು, ಕಲಬುರಗಿ ಬೆಳಗಾವಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡಲು 240 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಎಪಿಎಂಸಿ ಕಾಯ್ದೆ ಹಿಂತೆಗೆತ:
ಮತ್ತೊಂದು ಮಹತ್ತರ ಘೋಷಣೆ ಎಂದರೆ ಎಂಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಲಾಗಿದೆ. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲಿಡಲಾಗಿದೆ. ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು, ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ನೀಡುವ ಹೈಟೆಕ್ ಹಾರ್ವೆಸ್ಟರ್ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಅಬಕಾರಿ ತೆರಿಗೆ ಹೆಚ್ಚಳ:
ಇನ್ನು ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್. ಸಿದ್ದರಾಮಯ್ಯ ಅವರು ಮದ್ಯಪ್ರಿಯರಿಗೆ ಬರೆ ಹಾಕಿದ್ದಾರೆ. ಶೇಕಡಾ 20 ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಹೊರೆ ಹಾಕಿದ್ದಾರೆ.
ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ 10 ಕೋಟಿ ರೂಪಾಯಿ, ಅನುಗ್ರಹ ಯೋಜನೆ ಮರು ಜಾರಿಲೋಕೋಪಯೋಗಿ ಇಲಾಖೆಗೆ 10,143 ಕೋಟಿ ರೂಪಾಯಿ ಅನುದಾನ, ಸಾರಿಗೆ ಇಲಾಖೆಗೆ 11 ಸಾವಿರ ಕೋಟಿ, ಕರ್ನಾಟಕ ಕಾಫಿ ಬ್ರಾಂಡಿಂಗ್‌ಗೆ ಉತ್ತೇಜನ ನೀಡುವ ಕೆಲಸ ಮಾಡಿದ್ದಾರೆ.
ಯಾವ್ಯಾವ ವಲಯಕ್ಕೆ ಎಷ್ಟು ಅನುದಾನ..?
– ಶಕ್ತಿ ಯೋಜನೆಗೆ 4,000 ಕೋಟಿ ವೆಚ್ಚ ನಿರೀಕ್ಷೆ
– ಕೃಷಿ ತೋಟಗಾರಿಕೆಗೆ 5860 ಕೋಟಿ
– 100 ಕೋಟಿ ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆ ಮರುಜಾರಿ
– ಪಶು ಸಂಗೋಪನೆ ಮೀನುಗಾರಿಕೆಗೆ 3,024 ಕೋಟಿ
– ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ನೆರವು
– ಆಹಾರ ಇಲಾಖೆಗೆ 10,460 ಕೋಟಿ
– ಆಗಸ್ಟ್ ನಲ್ಲಿ ಗೃಹಜ್ಯೋತಿ ಯೋಜನೆ ಜಾರಿ
– ಗೃಹಜೋತಿಗೆ ವಾರ್ಷಿಕ ಅಂದಾಜು 13,910 ಕೋಟಿ
– ನಮ್ಮ ಮೆಟ್ರೋಗೆ 30,000 ಕೋಟಿ
– ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ಮೀಸಲು
– ಹಸು, ಎತ್ತು, ಎಮ್ಮೆ ಮೃತಪಟ್ಟರೆ 10,000 ಪರಿಹಾರ
– ಇಂಧನ ಇಲಾಖೆಗೆ 22,773 ಕೋಟಿ
– ಸಾಲ ಮರುಪಾವತಿಗೆ 22,441 ಕೋಟಿ
– ಲೋಕೋಪಯೋಗಿ 1043 ಕೋಟಿ
ನಂದಿನಿ ಮಾದರಿ ಬ್ರಾಂಡಿಂಗ್
ನಂದಿನಿ ಮಾದರಿಯಲ್ಲೇ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೇ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.ತೋಟಗಾರಿಕೆ ಬೆಳೆಗಳ ಬ್ರಾಂಡಿಂಗ್‌ಗೂ ಒತ್ತು ನೀಡಲಾಗುವುದು.
ಕೃಷಿ ಉದ್ಯಮಿಗಳಿಗೆ ಉತ್ತೇಜನ ನೀಡಲು ನವೋದ್ಯಮ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲು ಕ್ರಮ. ಕೆಪೆಕ್ ಸಂಸ್ಥೆ ಮೂಲಕ ರೈತ ಉತ್ಪಾದಕ ಸಂಸ್ಥೆ, ನವೋದ್ಯಮಿಗಳಿಗೆ ಹಾಗೂ ಕಿರು ಆಹಾರ ಸಂಸ್ಕರಣೆ ಉದ್ಯಮಿದಾರರಿಗೆ 50 ಕೋಟಿ ರೂ. ನೆರವು. ಒದಗಿಸಲಾಗುವುದು.
ಕೃಷಿ ಯಂತ್ರೋಪಕರಣ
ಕೃಷಿ ಯಂತ್ರೋಪಕರಣ ಬಾಡಿಗೆ ನೀಡಲು 300 ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆ. ಈ ಸಾಲಿನಲ್ಲಿ 100 ಹಬ್ ಸ್ಥಾಪನೆಗೆ ಕೋಟಿ ರೂ. ರಾಜ್ಯದ ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ನೀಡುವ ತಲಾ 20 ಲಕ್ಷ ರೂ.ವರೆಗಿನ ಸಾಲಕ್ಕೆ ಶೇ. 4 ಬಡ್ಡಿ ಸಹಾಯಧನ ನೀಡಲಾಗುವುದು. ಎಂಟು ಶೀತಲಘಟಕ ಸ್ಥಾಪನೆಗೆ ಒಂದು ಕೋಟಿ ರೂ. ಮೀರದಂತೆ ಸೀಡ್ ಕ್ಯಾಪಿಟಲ್‌ಗೆ ನಿಗದಿ ಮಾಡಲು ಅನುಮತಿ ನೀಡಲಾಗುವುದು.
ಈ ಸುದ್ದಿಯನ್ನೂ ಓದಿ:
Siddaramaiah: ಮಾಜಿ ಸಿಎಂಗಳ ಮದಗಜ ಕಾಳಗ: ಹೆಚ್ ಡಿ ಕುಮಾರಸ್ವಾಮಿ ವಾರ್… ಸಿದ್ದರಾಮಯ್ಯ ಗುರ್ ಗುರ್…!
ರೇಷ್ಮೆಗೆ ಒತ್ತು
ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ರೇಷ್ಮೆ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ
ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು.
ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ
ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.
ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ
ಸೌಲಭ್ಯ ಒದಗಿಸಲಾಗುವುದು.
ಪಶುಸಂಗೋಪನೆ
ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಚರ್ಮಗಂಟು ರೋಗದಿಂದ ಒಟ್ಟು 32,045 ಜಾನುವಾರುಗಳು ಮರಣ ಹೊಂದಿರುತ್ತವೆ. ಈ ಪೈಕಿ ಒಟ್ಟು 25,859 ಮರಣ ಹೊಂದಿದ ಜಾನುವಾರುಗಳಿಗೆ 53 ಕೋಟಿ ರೂ. ಪರಿಹಾರಧನವನ್ನು ವಿತರಿಸಲಾಗಿದೆ. ಬಾಕಿ ಇರುವ 5,851 ಮರಣಹೊಂದಿದ ಜಾನುವಾರುಗಳ ಮಾಲೀಕರಿಗೆ 12 ಕೋಟಿ ರೂ. ಪರಿಹಾರಧನವನ್ನು ವಿತರಿಸಲು ಕ್ರಮ ವಹಿಸಲಾಗುವುದು.
ಗ್ರಾಹಕರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಪ್ರೋಟೀನ್‌ಯುಕ್ತ ಮಾಂಸ ಮತ್ತು ಮೊಟ್ಟೆ ಪೂರೈಕೆಗೆ ಅವಕಾಶ ಕಲ್ಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಜಾನುವಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳು ಹಾಗೂ ಉತ್ತಮವಾದ ಮಾರುಕಟ್ಟೆ ಅಭಿವೃದ್ಧಿ ಮಾಡಲಾಗುವುದು.
ಮೀನುಗಾರಿಕೆ ಸಾಲ ಮಿತಿ
ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ. ಗಳಿಂದ ಮೂರು ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು ಅಕ್ಷರಮಿತ್ರ, ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು.
ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ
ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು.
“ಶಕ್ತಿ ಯೋಜನೆ”
• ಸರ್ಕಾರಿ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಪ್ರಯಾಣ
• ವಾರ್ಷಿಕ ಅಂದಾಜು 4,000 ಕೋಟಿ ರೂ. ವೆಚ್ಚದ ನಿರೀಕ್ಷೆ
• ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚ ಟುವಟಿಕೆ ಕೈಗೊಳ್ಳಲು ಅವಕಾಶ
• ಮಹಿಳೆಯರಿಗೆ ಪ್ರಯಾಣ ವೆಚ್ಚದ ಉಳಿತಾಯ ಹಾಗೂ ಸುರಕ್ಷಿತ ಪ್ರಯಾಣದ ವಾತಾವರಣ
• ಪ್ರತಿ ದಿನ ಸುಮಾರು 50 – 60 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ
“ಅನ್ನ ಭಾಗ್ಯ”
• ಹಸಿವು ಮುಕ್ತ ಕರ್ನಾಟಕಕ್ಕೆ ಸರ್ಕಾರದ ಪಣ
• ಎಲ್ಲಾ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆ
• ಆಹಾರಧಾನ್ಯ ಲಭ್ಯವಾಗುವ ವರೆಗೆ ಪ್ರತಿ ಫಲಾನುಭವಿಗೆ 170 ರೂ. ನಂತೆ ಡಿಬಿಟಿ ಮೂಲಕ ನಗದು ವರ್ಗಾವಣೆ
• ಅಂದಾಜು 4.42 ಕೋಟಿ ಫಲಾನುಭವಿಗಳಿಗೆ ಅನುಕೂಲ
• ಈ ಯೋಜನೆಗೆ 10,275 ಕೋಟಿ ರೂ. ಅನುದಾನ
“ಯುವ ನಿಧಿ”
• 2023ರಲ್ಲಿ ಪದವಿ ಪಡೆದು 6 ತಿಂಗಳ ವರೆಗೂ ಉದ್ಯೋಗ ಲಭಿಸದ ಯುವ ಜನರಿಗೆ 2 ವರ್ಷಗಳ ವರೆಗೆ ಅಥವಾ ಉದ್ಯೋಗ ಸಿಗುವ ವರೆಗೆ ನಿರುದ್ಯೋಗ ಭತ್ಯೆ
• ಪದವೀಧರರಿಗೆ ಪ್ರತೀ ತಿಂಗಳು 3,000 ರೂಪಾಯಿ
• ಡಿಪ್ಲೊಮಾ ಪದವೀಧರರಿಗೆ ಪ್ರತೀ ತಿಂಗಳು 1,500 ರೂಪಾಯಿ
• ನಾಡಿನ ಯುವ ಜನತೆಗೆ ಆರ್ಥಿಕ ನೆರವು ನೀಡಿ ಆತ್ಮವಿಶ್ವಾಸ ತುಂಬಿ ಬದುಕಿನಲ್ಲಿ ನೆಲೆ ಕಂಡುಕೊಳ್ಳಲು ಸಹಾಯ
• ಸುಮಾರು 3.7 ಲಕ್ಷ ಯುವ ಜನರಿಗೆ ಈ ಯೋಜನೆಯ ಲಾಭ
“ಗೃಹ ಜ್ಯೋತಿ”
• ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಅವರ ಸರಾಸರಿ ಬಳಕೆಯ ಜೊತೆಗೆ ಶೇ. 10 ರಷ್ಟು ಹೆಚ್ಚುವರಿ ಯುನಿಟ್ ವಿದ್ಯುತ್ ಉಚಿತ. ಗರಿಷ್ಠ 200 ಯುನಿಟ್ ವರೆಗೆ
• ವಾರ್ಷಿಕ ಅಂದಾಜು 13,910 ಕೋಟಿ ರೂ. ವೆಚ್ಚದಲ್ಲಿ ಜಾರಿ
• 2 ಕೋಟಿಗಿಂತ ಅಧಿಕ ಗೃಹ ಬಳಕೆದಾರರಿಗೆ ಈ ಯೋಜನೆಯಿಂದ ಅನುಕೂಲ
• ಪ್ರತಿ ಕುಟುಂಬಕ್ಕೆ ಪ್ರತಿ ವ್ಯಕ್ತಿಗೆ ಇಂಧನ ಖಾತರಿ ನೀಡುವ ಯೋಜನೆ
“ಗೃಹಲಕ್ಷ್ಮಿ ಯೋಜನೆ”
• ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ನೆರವಿನ ನೇರ ವರ್ಗಾವಣೆ
• ಈ ಯೋಜನೆಗೆ ವಾರ್ಷಿಕ ಅಂದಾಜು 30,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ.
• ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ
• ಬೆಲೆಯೇರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ನೆಮ್ಮದಿ
• ಸುಮಾರು 1.30 ಕೋಟಿ ಮಹಿಳೆಯರಿಗೆ ಈ ಯೋಜನೆಯಿಂದ ಲಾಭ
ಸಹಕಾರ ಮತ್ತು ರೇಷ್ಮೆ:
• 30 ಲಕ್ಷಕ್ಕೂ ಹೆಚ್ಚು ರೈತರಿಗೆ 25,000 ಕೋಟಿ ರೂ. ಸಾಲ ವಿತರಣೆ ಗುರಿ
• ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಕ್ರಮ
• ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರೈತರಿಗೆ ಸರಕು ಸಾಗಾಣಿಕೆಗೆ ಪಿಕ್‌ಅಪ್ ವ್ಯಾನ್ ಖರೀದಿಗೆ ಶೇ.4 ರ ಬಡ್ಡಿ ದರದಲ್ಲಿ 7 ಲಕ್ಷ ರೂ. ವರೆಗಿನ ಸಾಲ ಸೌಲಭ್ಯ.
• ರಾಜ್ಯದ ಆಯ್ದ 50 ತರಕಾರಿ ಮಾರುಕಟ್ಟೆಗಳಲ್ಲಿ ಮಿನಿ ಶೀತಲಗೃಹಗಳ ಸ್ಥಾಪನೆ.
ಶಿಕ್ಷಣಕ್ಕೆ ಆದ್ಯತೆ:
• ಸಮಾಜದ ಸ್ವಾಸ್ಥ್ಯ ಕಾಪಾಡುವ ಆಶಯದಿಂದ ಪಠ್ಯಪುಸ್ತಕ ಮರುಪರಿಷ್ಕರಣೆಗೆ ಕ್ರಮ.
* ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಿಕತೆಯನ್ನು ಆಧರಿಸಿ ಹೊಸ ಶಿಕ್ಷಣ ನೀತಿ ರೂಪಿಸಲು ಕ್ರಮ.
• 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುವ ಪೂರಕ ಪೌಷ್ಟಿಕ ಆಹಾರ; 60 ಲಕ್ಷ ಮಕ್ಕಳಿಗೆ ಅನುಕೂಲ; 280 ಕೋಟಿ ರೂ. ಅನುದಾನ.
• ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಳ. 153 ಕೋಟಿ ರೂ. ಅನುದಾನ.
• ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ
ನೀರಾವರಿಗೆ ಉತ್ತೇಜನ:
• ಪ್ರಗತಿಯಲ್ಲಿರುವ 940 ಕೋಟಿ ರೂ. ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ.
• 770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
• ಎತ್ತಿನಹೊಳೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು, ಮೇಕೆದಾಟು ಯೋಜನೆಗೆ ಅರಣ್ಯ ಭೂಮಿ ಸ್ವಾಧೀನ, ಭೂಸ್ವಾಧೀನಕ್ಕೆ ಕ್ರಮ
ಅನ್ನದಾತನಿಗೆ ಸಾಲ ಸೌಲಭ್ಯ
• ಶೂನ್ಯ ಬಡ್ಡಿ ದರದಲ್ಲಿ ನೀಡುವ ಅಲ್ಪಾವಧಿ ಸಾಲದ ಮಿತಿ 5 ಲಕ್ಷ ರೂ. ಗಳಿಗೆ ಹೆಚ್ಚಳ.
• ಶೇ. 3ರ ಬಡ್ಡಿ ದರದಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷ ರೂ. ಗಳಿಂದ 15 ಲಕ್ಷ ರೂ. ಗಳಿಗೆ ಹೆಚ್ಚಳ.
ಮೀನುಗಾರಿಕೆಗೆ ಉತ್ತೇಜನ:
• ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ.
• ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ
2 ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು.
• ಮೀನುಗಾರಿಕಾ ದೋಣಿಗಳ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ; 5ಕೋಟಿ ರೂ. ನೆರವು.
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ:
•ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ.
• ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ.
• ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ
Siddaramaiah Budget, Siddaramaiah News, Siddaramaiah Budget Update, Siddaramaiah Budget Record, Siddaramaiah Budget news, Siddaramaiah Budget Highlights
Comments 2