SUDDIKSHANA KANNADA NEWS/ DAVANAGERE/ DATE:15-10-2023
ಬೆಂಗಳೂರು: ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತನ್ನ ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.
Read Also This Story:
Israel: ಮೊದಲು ಬಂದವರಿಗೆ ಮೊದಲ ಆದ್ಯತೆ: ಯುದ್ಧಪೀಡಿತ ಸ್ಥಳದಿಂದ ಭಾರತಕ್ಕೆ ಬರುತ್ತಿದ್ದಾರೆ ಭಾರತೀಯರು: ಇಸ್ರೇಲ್ ನಲ್ಲಿ ಎಷ್ಟು ಭಾರತೀಯರಿದ್ದಾರೆ ಗೊತ್ತಾ…?
ಅವರು ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು.
ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸುತ್ತಿದೆ. ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ
ಆಶಯ. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಒರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಸರ್ವ ಜನರ ಆರ್ಥಿಕ ಸ್ವಾತಂತ್ರ್ಯಕ್ಕಾಗಿಯೇ ನಾನು
ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು ಎಂದು ತಿಳಿಸಿದರು.
ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು. ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ಹಾಜರಿದ್ದರು.
ವೇದಿಕೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು.