Site icon Kannada News-suddikshana

70 ವರ್ಷದ ಹಿಂದಿನ ಪೊಲೀಸ್ ಕ್ಯಾಪ್ ಬದಲು, ಪೀಕ್ ಕ್ಯಾಪ್ ಮಾದರಿ ಆಯ್ಕೆ ಮಾಡಿದ್ದೇ ಸಿಎಂ ಸಿದ್ದರಾಮಯ್ಯರಂತೆ!

ಸಿದ್ದರಾಮಯ್ಯ

ಬೆಂಗಳೂರು: ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

READ ALSO THIS STORY: ಬದಲಾಯ್ತು ಟೋಪಿ: ಕರ್ನಾಟಕ ಪೊಲೀಸರಿಗೆ ಪೀಕ್‌ ಕ್ಯಾಪ್‌ ಮುಕುಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿ ಎಂದು ಕರೆ ನೀಡಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಕರೆ ನೀಡಿದರು.

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

Exit mobile version