ಬೆಂಗಳೂರು : ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ಚೆನ್ನೈ ನಡುವಿನ ಪಂದ್ಯದಲ್ಲಿ RCB ಭರ್ಜರಿ ಗೆಲುವು ಸಾಧಿಸುವ ಮೂಲಕ ತಂಡವು ಕೊನೆಗೂ ಪ್ಲೇ ಆಫ್‌ಗೆ ಪ್ರವೇಶ ಪಡೆದಿದೆ. ಈ ಹಿನ್ನೆಲೆಯಲ್ಲಿ ತಂಡಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್‌ಸಿಪಿ ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. ನಮ್ಮ RCB ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ. ಇದು ಆರ್.ಸಿ.ಬಿಯ ಹೊಸ ಅಧ್ಯಾಯ ಎಂದು ಬರೆದುಕೊಂಡಿದ್ದಾರೆ. ಇನ್ನು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೂ ಟ್ವೀಟಿಸಿ.. ‘ಶಹಬ್ಬಾಶ್ ಹುಡುಗ್ರಾ! ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಆರ್ಸಿಬಿ ಕಪ್ ಗೆಲ್ಲುವ ಕನಸು ಜೀವಂತವಾಗಿದೆ. ಬದಲಾಗಿದೆ ಸಮಯ ಇದು RCBಯ ಹೊಸ ಅಧ್ಯಾಯ ಎಂದಿದ್ದಾರೆ. ಇನ್ನು, ರಾಜ್ಯದ ಹಲವೆಡೆ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯನ್ನು ಫ್ಯಾನ್ಸ್ ಮಾಡಿದ್ದು, “ಈ ಸಲ ಕಪ್ ನಮ್ದೇ” ಎಂಬ ಭರವಸೆಯಲ್ಲಿದ್ದಾರೆ.