ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದೌರ್ಜನ್ಯ ಪ್ರಕರಣಗಳಲ್ಲಿ ಸತ್ಯವಿದ್ದರೆ ಮಾತ್ರ ಎಫ್ಐಆರ್ ದಾಖಲಿಸಿ: ಸಿಎಂ ಸಿದ್ದರಾಮಯ್ಯ

On: August 25, 2025 2:02 PM
Follow Us:
Siddaramaiah
---Advertisement---

SUDDIKSHANA KANNADA NEWS/ DAVANAGERE/DATE:25_08_2025

ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

READ ALSO THIS STORY: ತಂಗಿಗೆ ಕಿರುಕುಳ: ಬರ್ತ್ ಡೇಗೆ ಕೇಕ್ ಕತ್ತರಿಸಲು ತಂದಿದ್ದ ಲಾಂಗ್ ನಿಂದ ಇರಿದು ಯುವಕನ ಕೊಂದ ಸಹೋದರ!

ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ 33 ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸಿಬ್ಬಂದಿ ಕೊರತೆಯಿದ್ದರೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿ ದೂರು
ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪ್ರಕರಣಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ದೂರಿನಲ್ಲಿ ಸತ್ಯಾಂಶವಿದ್ದರೆ ಮಾತ್ರ ಎಫ್‌ಐಆರ್‌ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಶಾಸಕರಾದ ಎ.ಸಿ.ಶ್ರೀನಿವಾಸ್‌, ಎಚ್.ವಿ.ವೆಂಕಟೇಶ್‌, ಸುಧಾಮ್‌ ದಾಸ್, ಎ.ಆರ್.ಕೃಷ್ಣಮೂರ್ತಿ, ನರೇಂದ್ರ ಸ್ವಾಮಿ, ಡಿ.ತಿಮ್ಮಯ್ಯ, ಭಾಗೀರಥಿ, ಶಾಂತಾರಾಮ್‌ ಸಿದ್ದಿ, ಬಸವರಾಜ್‌, ಬಿಎಂ.ನಾಗರಾಜ್, ಎನ್.ಟಿ.ಶ್ರೀನಿವಾಸ್, ಬಸನಗೌಡ ತುರವಿಹಾಳ್‌, ರಾಜು ವೇಣುಗೋಪಾಲ ನಾಯಕ್‌, ಡಾ.ಉಮೇಶ್‌ ಜಾಧವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment