SUDDIKSHANA KANNADA NEWS/DAVANAGERE/DATE:29_11_2025
ಬೆಂಗಳೂರು: ಸಿಎಂ ಅಧಿಕಾರ ಹಂಚಿಕೆ ಬಿಕ್ಕಟ್ಟು ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಒಟ್ಟಿಗೆ ಉಪಾಹಾರ ಸೇವಿಸಿ ನಗು ಬೀರಿದ್ದಾರೆ. ಇದರ ಹಿಂದಿನ ಗುಟ್ಟು ಮಾತ್ರ ರಟ್ಟಾಗಿಲ್ಲ.
ಸಿದ್ದರಾಮಯ್ಯ ಅವರು ಶಿವಕುಮಾರ್ ಅವರಿಗೆ ಉಪಹಾರ ಕೂಟ ಆಯೋಜಿಸಿದ್ದರು. ಅದರಂತೆ ಬೆಳಿಗ್ಗೆಯೇ ಡಿಕೆಶಿ ಬಂದಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರದೊಳಗೆ ನಡೆಯುತ್ತಿರುವ ನಾಯಕತ್ವದ ಸಂಘರ್ಷದ ಕುರಿತು ಚರ್ಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ ಉಪಹಾರ ಕೂಟ ಆಯೋಜಿಸಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತು ನಡೆಯುತ್ತಿರುವ ಜಗಳ ಮಧ್ಯೆ, ಪಕ್ಷದ ಆಂತರಿಕ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಉಪಾಹಾರ ಕೂಟಕ್ಕೆ ಭೇಟಿಯಾದರು.
ಸಭೆಯ ನಂತರ, ಶಿವಕುಮಾರ್ ಅವರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹೈಕಮಾಂಡ್ ಅವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.




Leave a comment