SUDDIKSHANA KANNADA NEWS/ DAVANAGERE/ DATE:10-01-2025
ಮೈಸೂರು: ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್. ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾತನಾಡುತ್ತಾ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂಪಾಯಿ ತಿಂಗಳಿಗೆ ನೀಡುವುದಾಗಿ ಘೋಷಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆಶಾ ಕಾರ್ಯಕರ್ತೆಯರ ಮುಷ್ಕರ ಗಮನಕ್ಕೆ ಬಂದಿದೆ. ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.