SUDDIKSHANA KANNADA NEWS/ DAVANAGERE/ DATE:16-11-2024
ಮಹಾರಾಷ್ಟ್ರ: ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಾರಾಷ್ಟ್ರದ ಮಂಗಳವೇಡಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪೂರ್ಣ ಮಾಹಿತಿ ನೀಡಿದರು.
ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ
ಗೃಹಜ್ಯೋತಿ : ಒಂದು ಕೋಟಿ 62 ಲಕ್ಷ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ
ಅನ್ನಭಾಗ್ಯ: ಒಂದು ಕೋಟಿ 20 ಲಕ್ಷ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ*
ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ವರ್ಷ 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ.
ಯುವನಿಧಿ: ಸರ್ಕಾರ ಬಂದ 8 ತಿಂಗಳೊಳಗೆ ಇದೂ ಸೇರಿ ಎಲ್ಲಾ ಐದು ಗ್ಯಾರಂಟಿಗಳು ಆರಂಭವಾಗಿದ್ದು, ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮೋ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ ಎಂದು ಸಿಎಂ
ತಿಳಿಸಿದರು.