ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Siddaramaiah: ವಸತಿ ಹೀನರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ಈ ವರ್ಷ 3.11 ಲಕ್ಷ ಮನೆಗಳ ನಿರ್ಮಾಣದ ಗುರಿ

On: September 13, 2023 5:15 PM
Follow Us:
Siddaramaiah Good news
---Advertisement---

SUDDIKSHANA KANNADA NEWS/ DAVANAGERE/ DATE:13-09-2023

ಬೆಂಗಳೂರು: ರಾಜೀವ್‌ ಗಾಂಧಿ ವಸತಿ ನಿಗಮದ ಖಾತೆಯಲ್ಲಿ 1900 ಕೋಟಿಗೂ ಹೆಚ್ಚು ಅನುದಾನ ಲಭ್ಯವಿದೆ. 2940 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಈ ವರ್ಷ 3.11 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಗುರಿ ಸಾಧಿಸುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: 

Life Insurance Corporation ಆದಾಯಲ್ಲಿ ಎಷ್ಟು ಇಳಿಕೆ ಆಗಿದೆ ಗೊತ್ತಾ….? ಖಾಸಗಿ ವಲಯದ ಉದ್ಯಮದ ಪ್ರೀಮಿಯಂ ಆದಾಯದಲ್ಲಿ ಹೆಚ್ಚಳ

ವಸತಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಚನೆ ನೀಡಿದರು.

ಗಣಿಗಾರಿಕೆ ಪುನಶ್ಚೇತನ ನಿಗಮದಿಂದ ವಸತಿ ಯೋಜನೆಗಳಿಗೆ 1493 ಕೋಟಿ ರೂ. ಅನುದಾನ ಲಭ್ಯವಿದ್ದು, ಗಣಿ ಬಾಧಿತ ಪ್ರದೇಶಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಾಗ ಗುರುತಿಸಲು ಸೂಚಿಸಲಾಯಿತು. ಕೊಳೆಗೇರಿ ನಿರ್ಮೂಲನ ಮಂಡಳಿ ವತಿಯಿಂದ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮನೆಗಳನ್ನು ನಿರ್ಮಿಸಲು ಜಾಗ ಗುರುತಿಸಲು ಸೂಚಿಸಲಾಯಿತು. ರಾಜ್ಯದ 21 ಪದವಿ ಕಾಲೇಜುಗಳಿಗೆ ಜಮೀನು ಒದಗಿಸಲು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಜಾಗ ಒದಗಿಸಬಹುದು. ನಗರ ಪ್ರದೇಶದಲ್ಲಿ ನಿಗದಿತ ಮಾನದಂಡಗಳಂತೆ ಜಾಗ ಒದಗಿಸುವುದು ಕಷ್ಟವಾಗುತ್ತದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಇತರ ಇಲಾಖೆಗಳ ವ್ಯಾಪ್ತಿಯಲ್ಲಿ ನಿರುಪಯುಕ್ತವಾಗಿ ಖಾಲಿ ಜಾಗ ಲಭ್ಯವಿದ್ದಲ್ಲಿ, ಅದನ್ನು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ&
ಪಿಎನ್‌ಡಿಟಿ ಕಾಯ್ದೆಯನ್ವಯ ಸ್ಕ್ಯಾನಿಂಗ್‌ ಕೇಂದ್ರಗಳ ತಪಾಸಣೆ ನಡೆಸಲು ಸೂಚಿಸಿದರು.

ಆರೋಗ್ಯ, ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಕೊಟ್ಟಿದ್ದೇನು…?

 

  • ಗರ್ಭವತಿ ಮಹಿಳೆಯರ ದತ್ತಾಂಶದ ಮೇಲೆ ಜಿಲ್ಲಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು.
  • 2015 ರಲ್ಲಿ ಉತ್ತಮ ಸೂಚ್ಯಂಕ ಹೊಂದಿದ್ದ ಕೆಲವು ಜಿಲ್ಲೆಗಳು 2022 ರಲ್ಲಿ ಕುಸಿತ ಕಂಡಿದೆ
  • ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಣ್ಣುಮಕ್ಕಳು ಹಾಗೂ ಮಹಿಳೆಯರಲ್ಲಿ ಅನೀಮಿಯಾ ಮತ್ತು ಅಪೌಷ್ಟಿಕತೆಯ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
  • ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು.
  • ತಾಯಿ ಮರಣ ತಪಾಸಣೆಯನ್ನು (Death Audit) ಜಿಲ್ಲಾಧಿಕಾರಿಗಳು ನಿಯಮಿತವಾಗಿ ನಡೆಸಬೇಕು.
  • ಲಸಿಕೆ ಕಾರ್ಯಕ್ರಮಗಳಲ್ಲಿಯೂ ಸಾಧನೆ ಉತ್ತಮಪಡಿಸಬೇಕು.
  • ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಿಗೆ ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ.
  • 2443 ಹಾಸ್ಟೆಲುಗಳಲ್ಲಿ ಕೇವಲ 981 ಹಾಸ್ಟೆಲುಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ.
  • ಉಳಿದ 1462 ಹಾಸ್ಟೆಲುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ.
  • ಪ್ರತಿ ತಿಂಗಳು ಹಾಸ್ಟೆಲುಗಳಿಗೆ ದಿಢೀರ್‌ ಭೇಟಿ ಮಾಡಬೇಕು.
  • ಹಾಸ್ಟೆಲುಗಳ ಕುಂದುಕೊರತೆ, ಆಹಾರದ ಗುಣಮಟ್ಟ ಮತ್ತಿತರ ಸಮಸ್ಯೆಗಳು ಅರಿವಿಗೆ ಬರುತ್ತವೆ.
  • ಹಾಸ್ಟೆಲುಗಳ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಿ
  • ಹಾಸ್ಟೆಲುಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ಕೂಡಲೇ ಕ್ರಮ ವಹಿಸಬೇಕು.
  • ಹಾಸ್ಟೆಲುಗಳಿಗೆ ತಡೆಗೋಡೆ ಆವರಣ ನಿರ್ಮಿಸಲು ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಸೂಚನೆ

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment