Site icon Kannada News-suddikshana

Siddaramaiah: ವಸತಿ ಹೀನರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ಈ ವರ್ಷ 3.11 ಲಕ್ಷ ಮನೆಗಳ ನಿರ್ಮಾಣದ ಗುರಿ

Siddaramaiah Good news

Siddaramaiah Good news

SUDDIKSHANA KANNADA NEWS/ DAVANAGERE/ DATE:13-09-2023

ಬೆಂಗಳೂರು: ರಾಜೀವ್‌ ಗಾಂಧಿ ವಸತಿ ನಿಗಮದ ಖಾತೆಯಲ್ಲಿ 1900 ಕೋಟಿಗೂ ಹೆಚ್ಚು ಅನುದಾನ ಲಭ್ಯವಿದೆ. 2940 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಈ ವರ್ಷ 3.11 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಗುರಿ ಸಾಧಿಸುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: 

Life Insurance Corporation ಆದಾಯಲ್ಲಿ ಎಷ್ಟು ಇಳಿಕೆ ಆಗಿದೆ ಗೊತ್ತಾ….? ಖಾಸಗಿ ವಲಯದ ಉದ್ಯಮದ ಪ್ರೀಮಿಯಂ ಆದಾಯದಲ್ಲಿ ಹೆಚ್ಚಳ

ವಸತಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಚನೆ ನೀಡಿದರು.

ಗಣಿಗಾರಿಕೆ ಪುನಶ್ಚೇತನ ನಿಗಮದಿಂದ ವಸತಿ ಯೋಜನೆಗಳಿಗೆ 1493 ಕೋಟಿ ರೂ. ಅನುದಾನ ಲಭ್ಯವಿದ್ದು, ಗಣಿ ಬಾಧಿತ ಪ್ರದೇಶಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಾಗ ಗುರುತಿಸಲು ಸೂಚಿಸಲಾಯಿತು. ಕೊಳೆಗೇರಿ ನಿರ್ಮೂಲನ ಮಂಡಳಿ ವತಿಯಿಂದ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮನೆಗಳನ್ನು ನಿರ್ಮಿಸಲು ಜಾಗ ಗುರುತಿಸಲು ಸೂಚಿಸಲಾಯಿತು. ರಾಜ್ಯದ 21 ಪದವಿ ಕಾಲೇಜುಗಳಿಗೆ ಜಮೀನು ಒದಗಿಸಲು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಜಾಗ ಒದಗಿಸಬಹುದು. ನಗರ ಪ್ರದೇಶದಲ್ಲಿ ನಿಗದಿತ ಮಾನದಂಡಗಳಂತೆ ಜಾಗ ಒದಗಿಸುವುದು ಕಷ್ಟವಾಗುತ್ತದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಇತರ ಇಲಾಖೆಗಳ ವ್ಯಾಪ್ತಿಯಲ್ಲಿ ನಿರುಪಯುಕ್ತವಾಗಿ ಖಾಲಿ ಜಾಗ ಲಭ್ಯವಿದ್ದಲ್ಲಿ, ಅದನ್ನು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ&
ಪಿಎನ್‌ಡಿಟಿ ಕಾಯ್ದೆಯನ್ವಯ ಸ್ಕ್ಯಾನಿಂಗ್‌ ಕೇಂದ್ರಗಳ ತಪಾಸಣೆ ನಡೆಸಲು ಸೂಚಿಸಿದರು.

ಆರೋಗ್ಯ, ಸಮಾಜ ಕಲ್ಯಾಣ ಇಲಾಖೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಕೊಟ್ಟಿದ್ದೇನು…?

 

 

Exit mobile version