Site icon Kannada News-suddikshana

Siddaramaiah: 5 ಗ್ಯಾರಂಟಿ ಜಾರಿಗೆ ಕೈ ಹೈಕಮಾಂಡ್ ಸಿದ್ದರಾಮಯ್ಯಗೆ ಬಹುಪರಾಕ್: ಲೋಕಸಭೆ ಚುನಾವಣೆಗೆ 20-24 ಸ್ಥಾನ ಗೆಲ್ಲುವ ಟಾಸ್ಕ್

siddaramai In NewDelhijpg

siddaramai In NewDelhijpg

SUDDIKSHANA KANNADA NEWS/ DAVANAGERE/ DATE:02-08-2023

ನವದೆಹಲಿ: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಎಐಸಿಸಿ ಕಚೇರಿಯಲ್ಲಿ ನಡೆದ ಸತತ ಆರು ಗಂಟೆಗಳ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಹಾಗೂ ಇನ್ನಿತರೆ ಎಐಸಿಸಿ ನಾಯಕರ ಜತೆ ಕರ್ನಾಟಕದ 30 ಕ್ಕೂ ಹೆಚ್ಚು ಪಕ್ಷದ ನಾಯಕರುಗಳ ಮತ್ತು ಸಚಿವರ ಸಭೆ ನಡೆದಿದೆ ಎಂದರು.

Siddaramaiah

ಈ ಸುದ್ದಿಯನ್ನೂ ಓದಿ: 

Regional Transport Office:26 ಬೈಕ್ ಗಳ ವಶ: ಆರ್ ಟಿಒ ಕಚೇರಿಯ ನಾಲ್ವರು ಸಹಾಯಕ ಸಿಬ್ಬಂದಿ ಸೇರಿ ಐವರ ಬಂಧಿಸಿದ್ಯಾಕೆ…?

 

ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಸದಾಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ, ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ ಎಂದು Siddaramaiah ವಿವರಿಸಿದರು.

ಅಲ್ಲದೆ ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರುಗಳಿಗೆ ನೀಡುವ ಕುರಿತು ಚರ್ಚೆ ನಡೆದಿದೆ.ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ
ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳುಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದರು.

ಗೋಷ್ಠಿಯಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎವೈಸಿಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಉಪಸ್ಥಿತರಿದ್ದರು.

Siddaramaiah News, Siddaramaiah News Updates, Siddaramaiah Suddi, Siddaramaiah In Newdelhi, Siddaramaiah Speach, Siddaramaiah Task, Siddaramaiah Confidence

Exit mobile version