SUDDIKSHANA KANNADA NEWS/ DAVANAGERE/ DATE:16-02-2024
ಬೆಂಗಳೂರು: 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ಮೇಲ್ಮನವಿ ನ್ಯಾಯಮಂಡಳಿಯ ಎರಡು ರಾಜ್ಯ ಪೀಠಗಳನ್ನು ರಚಿಸಲಾಗುವುದು ಮತ್ತು ಕಾರ್ಯಗತಗೊಳಿಸಲಾಗುವುದು. ಇದು ತೆರಿಗೆ ವಿವಾದಗಳನ್ನು ಸ್ಥಳೀಯವಾಗಿ ಬಗೆಹರಿಸಲು ಸಹಾಯವಾಗುತ್ತದೆ ಎಂದು ಹೇಳಿದರು.
456. ಇಲಾಖೆಯು, ಗ್ರಾಹಕ ಸಂವೇದಿ ಜಿ.ಎಸ್.ಟಿ ಡೇಟಾಬೇಸ್ ಮ್ಯಾನೇಜ್ಮೆಂಟ್ ಮತ್ತು ಕೃತಕ ಬುದ್ಧಿಮತ್ತೆ ಚಾಲಿತ ವಿಶ್ಲೇಷಣಾತ್ಮಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಮಾಹಿತಿಯ ನಿಖರತೆ ಮತ್ತು ಮುನ್ಸೂಚಕ
ವಿಶ್ಲೇಷಣೆಯು ರಾಜಸ್ವ ಕ್ರೋಢೀಕರಣಕ್ಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ತೆರಿಗೆ ಕಾನೂನು ಮತ್ತು ತಾಂತ್ರಿಕ ಪರಿಣಿತಿಯನ್ನು ಹೊಂದಲು ಹಾಗೂ ಅವರಲ್ಲಿ ವಿಶ್ಲೇಷಣಾತ್ಮಕ ದೃಷ್ಟಿಕೋನವನ್ನು ಅಭಿವೃದ್ಧಿಪಡಿಸಲು ಇ-ತರಬೇತಿ ನೀಡಲಾಗುವುದು.
ಇದು ತೆರಿಗೆ ರಾಜಸ್ವ ಸೃಜನೆಗೆ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಮೋಸದ ನೋಂದಣಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ. 2024-25ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ
ಗುರಿಯನ್ನು 1,10,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.
ನೋಂದಣಿ ಮತ್ತು ಮುದ್ರಾಂಕ
ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ನಮ್ಮ ಸರ್ಕಾರವು 2023-24ರಲ್ಲಿ ಪರಿಷ್ಕರಣೆ ಮಾಡಿದ್ದು, ಪ್ರಸಕ್ತ ಆರ್ಥಿಕ ವರ್ಷದ ಜನವರಿ ತಿಂಗಳ ಅಂತ್ಯದವರೆಗೆ 15,692 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯಾಗಿದ್ದು,
ಶೇ.10ರಷ್ಟು ಬೆಳವಣಿಗೆ ಹೊಂದಿದೆ. 2024-25ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 26,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದರು.
ಅಬಕಾರಿ
ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML ಹಾಗೂ ಬಿಯರ್ನ ಸ್ಲಾಬ್ಗಳನ್ನು ಪರಿಷ್ಕರಿಸಲಾಗುವುದು. ಅಬಕಾರಿ ಇಲಾಖೆಯ ಎಲ್ಲಾ
ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುವುದು ಹಾಗೂ ಸ್ವಯಂಚಾಲಿತ ಅನುಮೋದನೆಗೂ ಅವಕಾಶ
ಕಲ್ಪಿಸಲಾಗುವುದು.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾರಿಗೆ
464. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ವಿವಿಧ ವಾಹನದ ವರ್ಗಗಳಿಗೆ ವಿಧಿಸುವ ತೆರಿಗೆಯನ್ನು ನಮ್ಮ ಸರ್ಕಾರವು ಪರಿಷ್ಕರಣೆ ಮಾಡಿತು. ಪ್ರಸಕ್ತ ಆರ್ಥಿಕ ವರ್ಷದ ಜನವರಿ
ತಿಂಗಳವರೆಗೆ 9,333 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ ಹಾಗು ಕಳೆದ ಸಾಲಿನ ಇದೇ ಅವಧಿಗೆ ಹೋಲಿಸಿದರೆ ಶೇ.19ರಷ್ಟು ಬೆಳವಣಿಗೆಯಾಗಿರುತ್ತದೆ. 2024-25ನೇ ಸಾಲಿಗೆ ಸಾರಿಗೆ ಇಲಾಖೆಗೆ ಒಟ್ಟು 13,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಗಣಿ ಮತ್ತು ಭೂ-ವಿಜ್ಞಾನ
2023-24 ನೇ ಆರ್ಥಿಕ ವರ್ಷದಲ್ಲಿ ಜನವರಿ ತಿಂಗಳ ಅಂತ್ಯದವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ 5,658 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. ಕಳೆದ ಸಾಲಿಗೆ ಹೋಲಿಸಿದರೆ, ಗಣಿಗಾರಿಕೆಯಿಂದ ಸ್ವೀಕೃತವಾದ ರಾಜಸ್ವದಲ್ಲಿ ಶೇ.22ರಷ್ಟು ಏರಿಕೆಯಾಗಿದೆ.
467. 2024-25ನೇ ಸಾಲಿಗೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 9,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಕಾನೂನು
ರಾಜ್ಯದಲ್ಲಿನ ಕಾನೂನು ನ್ಯಾಯಾಲಯಗಳು ಮತ್ತು ಶಾಸನಬದ್ಧ ನ್ಯಾಯಮಂಡಳಿಗಳ ಮುಂದೆ ಸರ್ಕಾರಿ ವ್ಯಾಜ್ಯಗಳನ್ನು ನಿರ್ವಹಿಸುವ ವಿಷಯದಲ್ಲಿ ಸಮರ್ಥ ಮತ್ತು ಜವಾಬ್ದಾರಿಯುತ ನಡವಳಿಕೆಯನ್ನು ಕಾನೂನಿನ ಮೂಲಕ ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ಅಧಿನಿಯಮ, 2023 ನ್ನು ಜಾರಿಗೆ ತರಲಾಗಿದೆ.
ರೈತರು ಮತ್ತು ಆರ್ಥಿಕವಾಗಿ ದುರ್ಬಲ ವ್ಯಕ್ತಿಗಳಿಗೆ ತ್ವರಿತ ನ್ಯಾಯ ಒದಗಿಸಲು ಸಿವಿಲ್ ಪ್ರಕ್ರಿಯೆ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023 ನ್ನು ಜಾರಿಗೆ ತರಲು ಕ್ರಮವಹಿಸಲಾಗಿದೆ. ರಾಜ್ಯದ ಉಚ್ಛ ನ್ಯಾಯಾಲಯಗಳಲ್ಲಿ ಮತ್ತು ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಕರ್ನಾಟಕ ಉಚ್ಚ ನ್ಯಾಯಾಲಯ ಕಾಯ್ದೆ ಮತ್ತು ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಕಾಯ್ದೆಗೆ ತಿದ್ದುಪಡಿ ತರಲು ಕ್ರಮವಹಿಸಲಾಗಿದೆ.
2023-24ನೇ ಸಾಲಿನಲ್ಲಿ 175 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ರಾಜ್ಯದ ವಿವಿಧ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃಧ್ಧಿಪಡಿಸಲಾಗುತ್ತಿದ್ದು, 2024-25ನೇ ಸಾಲಿನಲ್ಲಿ ಈ ಉದ್ದೇಶಕ್ಕಾಗಿ 175 ಕೋಟಿ ರೂ. ಅನುದಾನ ಒದಗಿಸಲಾಗುವುದು.
ರಾಜ್ಯದ ಎಲ್ಲಾ ನ್ಯಾಯಾಲಯಗಳ ಕಲಾಪಗಳ ನೇರ ಪ್ರಸಾರ ಮಾಡಲು ಮತ್ತು ನ್ಯಾಯಾಲಯಗಳ ಆಡಳಿತ ವ್ಯವಸ್ಥೆಯನ್ನು ಆಧುನೀಕರಿಸಲು 94 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ಉದ್ದೇಶಕ್ಕೆ 180 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ವಿರಾಜಪೇಟೆಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣವನ್ನು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಪೂರ್ಣವಾಗಿರುವ ಮೈಸೂರಿನ ವಕೀಲರ ಭವನವನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ನ್ಯಾಯವಾದಿಗಳ ಮೇಲಿನ ಹಿಂಸೆಯನ್ನು ತಡೆಯಲು ಮತ್ತು ನಿರ್ಭೀತರಾಗಿ ಕರ್ತವ್ಯ ನಿರ್ವಹಿಸಲು ಅನುವಾಗುವಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ, 2023 ಅನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಪರಿಷ್ಕೃತ ಅಂದಾಜು 2023-24
2023-24ರ ಪರಿಷ್ಕೃತ ಅಂದಾಜಿನಲ್ಲಿ ರಾಜ್ಯದ ಒಟ್ಟು ಜಮೆಗಳು 3,12,708 ಕೋಟಿ ರೂ.ಗಳಾಗಿದೆ. ರಾಜ್ಯದ ರಾಜಸ್ವ ಸ್ವೀಕೃತಿಯು 2,26,780 ಕೋಟಿ ರೂ.ಗಳಾಗಿದ್ದು, ಇದರಲ್ಲಿ ರಾಜ್ಯದ ಸ್ವಂತ ತೆರಿಗೆ ರಾಜಸ್ವವು 1,60,303 ಕೋಟಿ ರೂ.ಗಳು, ತೆರಿಗೆಯೇತರ ಸ್ವೀಕೃತಿ 12,000 ಕೋಟಿ ರೂ.ಗಳು ಹಾಗೂ ಕೇಂದ್ರ ಸರ್ಕಾರದಿಂದ 54,477 ಕೋಟಿ ರೂ.ಗಳ ಸ್ವೀಕೃತಿಯನ್ನು ಒಳಗೊಂಡಿದೆ.
2023-24ರ ಪರಿಷ್ಕೃತ ಅಂದಾಜಿನಲ್ಲಿ ಒಟ್ಟು ವೆಚ್ಚ 3,17,836 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಇದರಲ್ಲಿ ರಾಜಸ್ವ ವೆಚ್ಚ 2,40,731 ಕೋಟಿ ರೂ.ಗಳು ಮತ್ತು ಬಂಡವಾಳ ವೆಚ್ಚ ಹಾಗೂ ಸಾಲ ಮರುಪಾವತಿ
ಸೇರಿ 77,105 ಕೋಟಿ ರೂ.ಗಳನ್ನು ಅಂದಾಜು ಮಾಡಲಾಗಿದೆ.
ಆಯವ್ಯಯ ಅಂದಾಜು 2024-25
2024-25ನೇ ಸಾಲಿಗೆ 2,63,178 ಕೋಟಿ ರೂ.ಗಳ ರಾಜಸ್ವ ಜಮೆಯನ್ನು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಸ್ವಂತ ತೆರಿಗೆಯಿಂದ 1,89,893 ಕೋಟಿ ರೂ.ಗಳ ಸಂಗ್ರಹಣೆಯನ್ನು ಅಂದಾಜು ಮಾಡಲಾಗಿದೆ.
ತೆರಿಗೆಯೇತರ ರಾಜಸ್ವಗಳಿಂದ 13,500 ಕೋಟಿ ರೂ.ಗಳು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ಸರ್ಕಾರದಿಂದ 44,485 ಕೋಟಿ ರೂ.ಗಳ ತೆರಿಗೆ ಪಾಲು ಹಾಗೂ 15,300 ಕೋಟಿ ರೂ.ಗಳ ಸಹಾಯಾನುದಾನ ಸ್ವೀಕೃತಿಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 1,05,246 ಕೋಟಿ ರೂ.ಗಳ ಸಾಲ, 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ.
2024-25ರ ಆಯವ್ಯಯದಲ್ಲಿ ಒಟ್ಟು 3,68,674 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜು ಮಾಡಲಾಗಿದೆ.
2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.
2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿಯ ಶೇ.23.68ರಷ್ಟು ತಲುಪಲಿದೆ ಎಂದು ಅಂದಾಜಿಸಲಾಗಿದೆ. 2024-25ರಲ್ಲಿ ರಾಜ್ಯದ ವಿತ್ತೀಯ ಕೊರತೆ ಹಾಗು ಒಟ್ಟು ಹೊಣೆಗಾರಿಕೆಯನ್ನು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ, 2002ರಲ್ಲಿ ನಿಗದಿಪಡಿಸಿರುವ ಮಿತಿಯೊಳಗೆ ಅಂದಾಜು ಮಾಡುವ ಮೂಲಕ ವಿತ್ತೀಯ ಶಿಸ್ತನ್ನು ಪಾಲನೆ ಮಾಡಲಾಗಿರುತ್ತದೆ ಎಂದು ಹೇಳಿದರು.