SUDDIKSHANA KANNADA NEWS/ DAVANAGERE/ DATE:13-09-2023
ಬೆಂಗಳೂರು: ನಮ್ಮ ರಾಜ್ಯದ ರೈತರ ಹಿತ ಮತ್ತು ಕುಡಿಯುವ ನೀರಿನ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ಕಾವೇರಿ ನೀರು ಹರಿಸುವಿಕೆ ಸಂಬಂಧ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯ ಸಂದರ್ಭಗಳಲ್ಲಿ ನೀರು ಬಿಡಲು ನಮ್ಮ ಅಭ್ಯಂತರ ಇಲ್ಲ. ಸಂಕಷ್ಟ ಸಂದರ್ಭಗಳಲ್ಲಿ, ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ನಾವು ಹೆಚ್ಚು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ ಎಂದರು.
ಈ ಸುದ್ದಿಯನ್ನೂ ಓದಿ:
Areca nut: ಅಡಿಕೆ ಕ್ವಿಂಟಾಲ್ ಗೆ 50 ಸಾವಿರ: ರೈತರ ಮೊಗದಲ್ಲಿ ಮುಂದುವರಿದ ಮಂದಹಾಸ… ಎಷ್ಟೆಷ್ಟು ಅಡಿಕೆ ದರ ಇದೆ ಗೊತ್ತಾ…?
ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ ಎಂದು ಎಂದು ಹೇಳಿದರು.
ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.
ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಇತರೆ ಹೈಲೈಟ್ಸ್:
- ಕಳೆದ 28 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕಾವೇರಿ, ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚಿಸಲಾಗಿತ್ತು.
- ಇಂದು ಕೇವಲ ಕಾವೇರಿ ನೀರಿನ ವಿಚಾರವಾಗಿ ಸಭೆ ನಡೆಸಿದ್ದೇವೆ
- ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ನೀಡಿ ನಮ್ಮ ವಾದ ಆಲಿಸಿದ ನಂತರ ಐದು ಸಾವಿರ ಕ್ಯೂಸೆಕ್ಸ್ ಬಿಡಲು ಸೂಚಿಸಿತ್ತು.
- ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಮಾಡಿದೆ. ಸಾಮಾನ್ಯ ಮಳೆಯಾದಾಗ ನೀರು ಬಿಡಲು ತಕರಾರಿಲ್ಲ. ಕಳೆದ ವರ್ಷ 667 ಟಿಎಂಸಿ ಬಿಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಸಾಮಾನ್ಯ
ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. - ಆದರೆ ದುರದೃಷ್ಟವಶಾತ್ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ
- 99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ.
- ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು.
- ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು.
- ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಬೇಕಾಗಿದೆ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.
- ಅಧಿಕಾರಿಗಳು ರಾಜ್ಯದ ಪರಿಸ್ಥಿತಿ, ವಾಸ್ತವಾಂಶ ತಿಳಿಸಿದರೂ ನೀರು ಬಿಡುವಂತೆ ಸೂಚಿಸಿದ್ದಾರೆಯ
- ನಮ್ಮ ಮುಂದೆ ಎರಡು ದಾರಿ ಇದೆ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಹಾಕುವುದು ಮೊದಲ ದಾರಿ.
- ಎರಡನೇ ಆಯ್ಕೆ ನೀರು ಇಲ್ಲ ನಮ್ಮ ಬಳಿ ಎಂದು ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕು
- *ಇಂದು ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ.
- ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.
- ನಾವು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕಾಗಿದೆ.
- ರಾಜ್ಯದ ಮುಖ್ಯಮಂತ್ರಿಯಾಗಿ, ನೀರು ಕೊಡುವುದು ಕಷ್ಟವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ
- ರೈತರನ್ನು ಬಲಿಕೊಟ್ಟು ನೀರು ಕೊಡಲಾಗದು. ಈಗ ಸಂಕಷ್ಟದಲ್ಲಿದ್ದೇವೆ ನಾವು. ನಾವೆಲ್ಲರೂ ಒಟ್ಟಿಗೆ ಹೋಗಬೇಕು.
- ಈ ಸಂಕಷ್ಟಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ.
ಅಧಿಕಾರಿಗಳ ಚರ್ಚೆ ಬಳಿಕ ಸರ್ವಪಕ್ಷ ಸಭೆ ಕರೆಯಲು ತೀರ್ಮಾನ:
- ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬರಲು ಸಾಧ್ಯವಾಗಿಲ್ಲ.
- ಸುಪ್ರೀಂ ಕೋರ್ಟ್ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ.
- 99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ.
- ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು.
- 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು.
- ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.
- ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ.
- ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ, ನಂತರ ಐದು ಸಾವಿರ ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಮಾಡಿದೆ.
- ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು.
- ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ
ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ. - ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.
- ಸೆ. 18 ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್.ಎಸ್. ಭೋಸರಾಜು, ಕೆ.ವೆಂಕಟೇಶ್,
ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.