Site icon Kannada News-suddikshana

Siddaramaiah Meeting: ರಾಜ್ಯದ ಹಿತ ಕಾಯೋದಕ್ಕೆ ನಮ್ಮ ಆದ್ಯತೆ, ರಾಜಕೀಯ ಬೇಡ, ಒಟ್ಟಾಗಿ ಹೋರಾಡೋಣ: ಸಿಎಂ ಸಿದ್ದರಾಮಯ್ಯ

Siddaramaiah meeting In Bangalore

Siddaramaiah meeting In Bangalore

SUDDIKSHANA KANNADA NEWS/ DAVANAGERE/ DATE:13-09-2023

ಬೆಂಗಳೂರು: ನಮ್ಮ ರಾಜ್ಯದ ರೈತರ ಹಿತ ಮತ್ತು ಕುಡಿಯುವ ನೀರಿನ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ಕಾವೇರಿ ನೀರು ಹರಿಸುವಿಕೆ ಸಂಬಂಧ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯ ಸಂದರ್ಭಗಳಲ್ಲಿ ನೀರು ಬಿಡಲು ನಮ್ಮ ಅಭ್ಯಂತರ ಇಲ್ಲ. ಸಂಕಷ್ಟ ಸಂದರ್ಭಗಳಲ್ಲಿ, ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ನಾವು ಹೆಚ್ಚು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ ಎಂದರು.

ಈ ಸುದ್ದಿಯನ್ನೂ ಓದಿ: 

Areca nut: ಅಡಿಕೆ ಕ್ವಿಂಟಾಲ್ ಗೆ 50 ಸಾವಿರ: ರೈತರ ಮೊಗದಲ್ಲಿ ಮುಂದುವರಿದ ಮಂದಹಾಸ… ಎಷ್ಟೆಷ್ಟು ಅಡಿಕೆ ದರ ಇದೆ ಗೊತ್ತಾ…?

ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ ಎಂದು ಎಂದು ಹೇಳಿದರು.

ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಇತರೆ ಹೈಲೈಟ್ಸ್: 

 

 

ಅಧಿಕಾರಿಗಳ ಚರ್ಚೆ ಬಳಿಕ ಸರ್ವಪಕ್ಷ ಸಭೆ ಕರೆಯಲು ತೀರ್ಮಾನ:

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌,
ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 

Exit mobile version