SUDDIKSHANA KANNADA NEWS/ DAVANAGERE/ DATE:13-03-2025
ಬೆಂಗಳೂರು: ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡು, ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರವನ್ನು ಮನೆಮನಗಳಿಗೆ ತಲುಪಿಸಲು ನನ್ನ ಹೆಗಲಿಗೆ ಹೆಗಲಾಗಿ ನಿಂತವರು ಡಿ. ಕೆ. ಶಿವಕುಮಾರ್. ಡಿ.ಕೆ.ಶಿ ಅವರನ್ನು ಒಳಗೊಂಡಂತೆ ಪಕ್ಷದ ಕಾರ್ಯಕರ್ತರ ಶ್ರಮ – ಸಹಕಾರದಿಂದ ಇಂದು ರಾಜ್ಯದಲ್ಲಿ ಸುಭದ್ರ ಸರ್ಕಾರ ರಚನೆಯಾಗಿದೆ ಎಂದು ಹೇಳಿದರು.
ವಿಪಕ್ಷಗಳ ಅಪಪ್ರಚಾರವನ್ನು ಮೆಟ್ಟಿನಿಂತು ನಮ್ಮ ಸಾಧನೆಗಳು ರಾಜ್ಯದ ಮನೆಮಾತಾಗಬೇಕು, ಇದಕ್ಕಾಗಿ ನಾವೆಲ್ಲರೂ ಕಾಂಗ್ರೆಸ್ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಹಾರೈಸಿರುವ ಸಿದ್ದರಾಮಯ್ಯರು ಡಿ. ಕೆ. ಶಿವಕುಮಾರ್ ಹಾಡಿ ಹೊಗಳಿರುವುದು ಚರ್ಚೆಗೆ ಕಾರಣವಾಗಿದೆ.