Home ದಾವಣಗೆರೆ ನನ್ನ ಕುಟುಂಬ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ಪತ್ನಿಯ ಮೇಲಿನ ಸುಳ್ಳು ಆರೋಪಕ್ಕೆ ರಾಜಕೀಯ ಸನ್ಯಾಸದ ಯೋಚನೆ ಬಂದಿತ್ತು: ಸಿದ್ದರಾಮಯ್ಯ ಬೇಸರ
ದಾವಣಗೆರೆನವದೆಹಲಿಬೆಂಗಳೂರು

ನನ್ನ ಕುಟುಂಬ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ಪತ್ನಿಯ ಮೇಲಿನ ಸುಳ್ಳು ಆರೋಪಕ್ಕೆ ರಾಜಕೀಯ ಸನ್ಯಾಸದ ಯೋಚನೆ ಬಂದಿತ್ತು: ಸಿದ್ದರಾಮಯ್ಯ ಬೇಸರ

Share
ಸಿದ್ದರಾಮಯ್ಯ
Share

ಬೆಂಗಳೂರು: ರಾಜಕೀಯ ಪಯಣದ ನನ್ನಹಾದಿಯಲ್ಲಿ ಹೆಜ್ಜೆಹೆಜ್ಜೆಗೂ ನಾನು ಪಟ್ಟಭದ್ರರ ದ್ವೇಷ ಅಸೂಯೆಗೆ ಈಡಾಗಿ‍ದ್ದೇನೆ. ಹೊರಗಿನವರ ಮತ್ತು ಒಳಗಿನವರ ಮೋಸ-ವಂಚನೆ-ಪಿತೂರಿಗೆ ಒಳಗಾಗಿದ್ದೇನೆ. ಇದರಿಂದಾಗಿ ಹಲವಾರು ಬಾರಿ ಬಿದ್ದಿದ್ದೇನೆ, ಬಿದ್ದಲ್ಲಿಂದಲೇ ಎದ್ದಿದ್ದೇನೆ. ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು ಎಂದರು.

ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ನನ್ನ ನೋವು,ದು:ಖ-ದುಮ್ಮಾನಗಳನ್ನು ಈ ಸಂದರ್ಭದಲ್ಲಿ ಪಟ್ಟಿಮಾಡಿ ನನ್ನ ಮನಸ್ಸನ್ನು ಕಹಿಮಾಡಿಕೊಳ್ಳುವುದಿಲ್ಲ. ಆದರೆ ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ ಎಂದು ಹೇಳಿದರು.

ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *