Site icon Kannada News-suddikshana

ಇನ್ನೂ 3 ವರ್ಷ ಸಿಎಂ ನಾನೇ ಎಂದ ಸಿದ್ದರಾಮಯ್ಯ

cm siddaramaiah

ಸಂಡೂರು: ಮುಡಾ ಹಗರದ ಕಾರಣ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗಿತ್ತು. ದಸರಾ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಆಗುತ್ತದೆ ಎಂದು ಚರ್ಚೆಗಳು ಶುರುವಾಗಿದ್ದವು. ಆದರೆ ಆ ಮಾತಿಗೆ ಸೊಪ್ಪು ಹಾಕದ ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ಮುಂದುವರಿದ್ದಾರೆ. ಈ ನಡುವೆ ಮುಂದಿನ ಮೂರು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ರಾಜಕೀಯ ವಿರೋಧಿಗಳಿಗೆ ಸಖತ್‌ ಟಾಂಗ್‌ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರು ಉಪಚುನಾವಣೆಯ ಪ್ರಚಾರದ ಸಂದರ್ಭದ ವೇಳೆ ಇನ್ನೂ ಮೂರುವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ, ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಭರದಿಂದ ಸಾಗುತ್ತಿರುವ ಈ ಹೊತ್ತಿನಲ್ಲೇ ಮುಖ್ಯಮಂತ್ರಿಗಳ ಈ ಹೇಳಿಕೆ ಸಾಕಷ್ಟು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಇನ್ನು ಸಂಡೂರು ಉಪಚುನಾವಣೆ ಆಖಾಡದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ, ಅನ್ನಪೂರ್ಣ ತುಕರಾಂ ಪರವಾಗಿ ಗುರುವಾರ ಮತಯಾಚನೆ ಮಾಡಿದ ಸಿದ್ದರಾಮಯ್ಯನವರು ಮುಂದಿನ ಮೂರುವರೆ ವರ್ಷಗಳ ಕಾಲ ನಾನೇ ಸಿಎಂ ಆಗಿರಲಿದ್ದೇನೆ ಎಂಬರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ.

 

Exit mobile version