Site icon Kannada News-suddikshana

Siddaramaiah Speach: ಮೋದಿಯವರೇ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ, ನಿಮ್ಮ, ಬಿಜೆಪಿಯವರ ಮಾತು ಸುಳ್ಳು: ಸಿದ್ದರಾಮಯ್ಯ ವಾಗ್ಬಾಣ

SUDDIKSHANA KANNADA NEWS/ DAVANAGERE/ DATE:30-08-2023

ಮೈಸೂರು: ಪ್ರಧಾನ ಮಂತ್ರಿ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳ ಜಾರಿಯಿಂದ, ಬಡವ-ಮಧ್ಯಮ ವರ್ಗದವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ದಿವಾಳಿಯಾಗಲಿಲ್ಲ. ದಿವಾಳಿಯಾಗುತ್ತದೆ ಎನ್ನುವ ನಿಮ್ಮ ಮಾತು ಪರಮ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)  ವಾಗ್ದಾಳಿ ನಡೆಸಿದರು.

ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂಭ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸುದ್ದಿಯನ್ನೂ ಓದಿ: 

Davanagere: ರವೀಂದ್ರನಾಥ್ ರಿಗೆ ಇರೋ ತೂಕ ಸಿದ್ದೇಶ್ವರಗಿಲ್ಲ, ಇಬ್ಬರ ನಡುವೆ ತುಂಬಾ ವ್ಯತ್ಯಾಸ ಇದೆ : ಎಸ್. ಎಸ್. ಮಲ್ಲಿಕಾರ್ಜುನ್

ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು.

ಭಾಷಣದ ಹೈಲೈಟ್ಸ್:

ಕಾರ್ಯಕ್ರಮದ ಸೈಡ್ ಲೈಟ್ಸ್:

Exit mobile version