Site icon Kannada News-suddikshana

Siddaramaiah: ಮತಾಂಧರು, ಅನೈತಿಕ ಪೊಲೀಸ್ ಗಿರಿ, ಕಾನೂನು ಕೈಗೆತ್ತಿಕೊಂಡ್ರೆ ಹುಷಾರ್: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

Check Distribution

Check Distribution

SUDDIKSHANA KANNADA NEWS/ DAVANAGERE/ DATE:19-06-2023

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮು ರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿತರಿಸಿದರು.

ಬಳಿಕ ಮಾತನಾಡಿದ ಅವರು, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಈಗ ಸರಿಪಡಿಸಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: 

Gruha Jyothi: ಉಚಿತ ವಿದ್ಯುತ್ ಪಡೆಯಬೇಕಾ? ಗೃಹ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ? ತಿಳಿಯಬೇಕಾ? ಈ ಸ್ಟೋರಿ ನೋಡಿ

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ
ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah)  ಹೇಳಿದರು.

ಈ ವೇಳೆ ಸಚಿವರಾದ ಜಮೀರ್ ಅಹ್ಮದ್, ಚೆಲುವರಾಯ ಸ್ವಾಮಿ, ಶಾಸಕ ತನ್ವೀರ್ ಸೇಠ್ ಮತ್ತಿತರರು ಹಾಜರಿದ್ದರು.

Siddaramaiah Warning, Siddaramaiah Check Distubution, Siddaramaiah  Speach, Siddaramaiah Latest News

ಸಿದ್ದರಾಮಯ್ಯ ಚೆಕ್ ವಿತರಣೆ, ಸಿದ್ದರಾಮಯ್ಯ ಭಾಷಣ
Exit mobile version