SUDDIKSHANA KANNADA NEWS/ DAVANAGERE/ DATE:19-08-2024
ದಾವಣಗೆರೆ: ಸಿಎಂ ಸಿದ್ದರಾಮಯ್ಯರ ಪರವಾಗಿ ಸಚಿವ ಸಂಪುಟದ ಸದಸ್ಯರು, ಶಾಸಕರು ನಿಂತಿದ್ದು, ದಾವಣಗೆರೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ನಿಂತಿದ್ದೇವೆ. ಶಾಸಕಾಂಗ ಸಭೆ ಕರೆದಿದ್ದು, ನಾವೆಲ್ಲರೂ ಹೋಗುತ್ತೇವೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಿಲ್ಲ ತಿಳಿಸಿದರು.
ಕಾಂಗ್ರೆಸ್ ನಲ್ಲಿ ಯಾವುದೇ ಒಡಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ನಾವೆಲ್ಲರೂ ಸಿಎಂ ಸಿದ್ದರಾಮಯ್ಯರ ಪರ ಇದ್ದು, ಗಟ್ಟಿಯಾಗಿ ಜೊತೆಯಾಗಿಯೇ ಇರುತ್ತೇವೆ. ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ. ಕೇವಲ 60 ಕ್ಕೂ ಹೆಚ್ಚು ಶಾಸಕರನ್ನು ಹೊಂದಿರುವ ಬಿಜೆಪಿಯಿಂದ ಆಗುತ್ತಾ? ನಾವು 135 ಶಾಸಕರಿದ್ದು, ಸರ್ಕಾರ ಪತನ ಯಾರಿಂದಲೂ ಅಸಾಧ್ಯ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಸಿದ್ದರಾಮಯ್ಯರು ಯಾಕೆ ರಾಜೀನಾಮೆ ನೀಡಬೇಕು? ತಪ್ಪೇ ಮಾಡಿಲ್ಲವಾದರೂ ರಾಜೀನಾಮೆ ನೀಡಬೇಕಾ? ಟಿವಿಯವರು ಮಾತ್ರ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಾರೆ. ನೀವು ಹೇಳಿದಾಕ್ಷಣ ರಾಜೀನಾಮೆ ಕೊಡಲು ಆಗುತ್ತದೆಯಾ ಎಂದು ಪ್ರಶ್ನಿಸಿದ ಅವರು, ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.