Site icon Kannada News-suddikshana

ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್!

ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದರಾಮಯ್ಯ ಪ್ರತಿಮೆ ನಿರ್ಮಿಸಲು ಯೋಚಿಸಲಾಗಿದೆ ಅಂತ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಗುಣಗಾನ ಮಾಡಿದ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ, ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಕನಸಿನ ಭಾರತವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ವೋದಯ ಸಮಾಜ ರಚನೆಯ ಹರಿಕಾರ, ಹಿಂದುಳಿದ ವರ್ಗಗಳ ಅಗ್ರನಾಯಕ ಸಿದ್ದರಾಮಯ್ಯ ಅವರಿಗೆ ಪ್ರತಿಮೆ ನಿರ್ಮಾಣ ಮೂಲದ ಗೌರವ ಸಲ್ಲಿಸಲಾಗುತ್ತದೆ ಅಂತ ಹೇಳಿದ್ದಾರೆ.

ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ 100 ವರ್ಷಗಳ ಹಿಂದೆ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಈ ನೆನಪಿನಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ. ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಂಡು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಪ್ರತಿಮೆ ನಿಲ್ಲಿಸಲು ಇದು ಸಕಾಲ. ಅದಕ್ಕಾಗಿ 1 ಕೋಟಿ ವೆಚ್ಚದಲ್ಲಿ ಯೋಜನೆ ಹಮ್ಮಿಕೊಳ್ಳಲಾಗಿದೆ ಅಂತ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಮಾಹಿತಿ ನೀಡಿದ್ರು.

Exit mobile version