ಬೆಂಗಳೂರ: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೋಬಳಿಗೊಂದು ವಸತಿ ಶಾಲೆಯನ್ನು ಪ್ರಾರಂಭಿಸಲಾಗುತ್ತದೆ ಅಂತ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಡಾII ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾII ಬಾಬು ಜಗಜೀವನ ರಾಮ್ ಭವನದ ಉದ್ಘಾಟಿಸಿ ಮಾತನಾಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ
ದಲಿತ ಸಂಘಟನೆಗಳು 70 ರ ದಶಕದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ.94-95 ರಲ್ಲಿ ಹಣಕಾಸು ಸಚಿವರಾಗಿದ್ದಾಗ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದ್ದು ತಾವೇ ಎಂದು ಸ್ಮರಿಸಿದರು.
ಹೋಬಳಿಗೊಂದು ವಸತಿ ಶಾಲೆ
ಇಂದು 821 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಹೋಬಳಿಗೊಂದು ವಸತಿ ಶಾಲೆ ತೆರೆಯುವ ನಿರ್ಧಾರ ಸರ್ಕಾರ ಮಾಡಿದೆ. 2024-25 ರಲ್ಲಿ 20 ವಸತಿ ಶಾಲೆಗಳನ್ನು ತೆರೆಯಲಾಗುವುದು. ಒಟ್ಟು 905 ವಸತಿ ಶಾಲೆಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸಲಿವೆ. ವಸತಿ ಶಾಲೆಗಳಲ್ಲಿ 211000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.