Home ದಾವಣಗೆರೆ ಕೃಷಿಯೇತರ ಉದ್ದೇಶಗಳಿಗೆ ಕೃಷಿ ಭೂ ಪರಿವರ್ತನೆಗೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ
ದಾವಣಗೆರೆನವದೆಹಲಿಬೆಂಗಳೂರು

ಕೃಷಿಯೇತರ ಉದ್ದೇಶಗಳಿಗೆ ಕೃಷಿ ಭೂ ಪರಿವರ್ತನೆಗೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಮಹತ್ವದ ಮಾಹಿತಿ

Share
Share

SUDDIKSHANA KANNADA NEWS/DAVANAGERE/DATE:10_12_2025

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ ಎಂದು ತಿಳಿಸಿದರು.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕ್ರೆ ವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ರಿನೀವಲ್ ಎನರ್ಜಿ ಯೋಜನೆ ಗಳಿಗೆ ಕನ್ವರ್ಶನ್ ಅಗತ್ಯವಿಲ್ಲ ಮತ್ತು ರೆವಿನ್ಯು ಕೋರ್ಟ್ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *