Home ದಾವಣಗೆರೆ ಎಸ್‌ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
ದಾವಣಗೆರೆನವದೆಹಲಿಬೆಂಗಳೂರು

ಎಸ್‌ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

Share
ಎಸ್‌ಐಆರ್
Share

ದಾವಣಗೆರೆ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಎನ್ಯೂಮರೇಷನ್ ಫಾರ್ಮ್ ಭರ್ತಿ ಪ್ರಕ್ರಿಯೆ ಕುರಿತು ಜನರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವುದು ಅತ್ಯಗತ್ಯವಾಗಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪೂರ್ವ ಸಿದ್ಧತೆ ಅಗತ್ಯವೆಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.

ಇಂದು ದಾವಣಗೆರೆಯ ಅಕ್ತರ್ ರಜಾ ಸರ್ಕಲ್‌ನಲ್ಲಿರುವ SDPI ಕಚೇರಿಯಲ್ಲಿ ಆಯೋಜಿಸಲಾದ “SIR Enumeration Forms Filling Process” ಕುರಿತ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, SIR ಪ್ರಕ್ರಿಯೆಯ ಸರಿಯಾದ ತಿಳುವಳಿಕೆ ಇಲ್ಲದಿದ್ದರೆ ಅನೇಕ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಮ್ಯಾಪಿಂಗ್ ಹಂತದ ಬಳಿಕ ನಡೆಯುವ ಎನ್ಯೂಮರೇಷನ್ ಪ್ರಕ್ರಿಯೆಯಲ್ಲಿ ಫಾರ್ಮ್‌ಗಳ ಸರಿಯಾದ ಭರ್ತಿ, ಅಗತ್ಯ ದಾಖಲೆಗಳ ಸಿದ್ಧತೆ ಹಾಗೂ ತಾಂತ್ರಿಕ ತಿಳುವಳಿಕೆ ಬಹುಮುಖ್ಯವಾಗಿದೆ. ಆದ್ದರಿಂದ ಕಾರ್ಯಕರ್ತರು, ಸಮಾಜದ ನಾಯಕರು ಮತ್ತು ಸಾರ್ವಜನಿಕರು ಈ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಅರಿವು ಹೊಂದಿ, ಮನೆಮನೆಗೆ ತೆರಳಿ ಜನರಿಗೆ ಸಹಾಯ ಮಾಡುವಂತೆ ಕರೆ ನೀಡಿದರು.

ಈ ತರಬೇತಿ ಕಾರ್ಯಾಗಾರದಲ್ಲಿ ಮಸೀದಿ ಸಮಿತಿಯ ಪದಾಧಿಕಾರಿಗಳು, ಧಾರ್ಮಿಕ ಗುರುಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳಾ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ SIR ಪ್ರಕ್ರಿಯೆಯ ಸಂಪೂರ್ಣ ವಿವರ, ಎನ್ಯೂಮರೇಷನ್ ಫಾರ್ಮ್ ಭರ್ತಿ ವಿಧಾನ, ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಲಾಯಿತು.

ಮತದಾನ ಹಕ್ಕು ಕೇವಲ ಒಂದು ಹಕ್ಕಲ್ಲ; ಅದು ಪ್ರಜಾಪ್ರಭುತ್ವದ ಅಸ್ತಿತ್ವವಾಗಿದೆ. ಯಾವುದೇ ಕಾರಣಕ್ಕೂ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದು ನಮ್ಮ ಎಲ್ಲರ ಜವಾಬ್ದಾರಿಯಾಗಿದೆ ಎಂದು ಅಪ್ಸರ್ ಕೊಡ್ಲಿಪೇಟೆ ಒತ್ತಿ ಹೇಳಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ತಾಹೀರ್ ಹುಸೇನ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಜ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಅಜಹರ್ ಬಾತಿ, ಜಿಲ್ಲಾ ಸಮಿತಿ ಸದಸ್ಯರಾದ ಯಾಹಿಯಾ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles