ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿರಿಗೆರೆ ಶ್ರೀಗಳ ಆಶೀರ್ವಾದ ಪಡೆದ ಡಾ. ಪ್ರಭಾ ಮಲ್ಲಿಕಾರ್ಜುನ್: ಕಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ

On: March 25, 2024 8:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:25-03-2024

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಇಂದು ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು
ಭೇಟಿಯಾಗಿ ಪರಮಪೂಜ್ಯರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪುತ್ರ ಸಮರ್ಥ ಶಾಮನೂರು, ಪುತ್ರಿ ಶ್ರೇಷ್ಠ ಶಾಮನೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಜಿ ಬಸವನ ಗೌಡ್ರು, ಎಸ್ ಎಸ್ ಹೈಟೆಕ್ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ. ಎಸ್. ಪ್ರಸಾದ್, ವೈದ್ಯಕೀಯ ನಿರ್ದೇಶಕ ಡಾ. ಅರುಣ್ ಅಜ್ಜಪ್ಪ, ಬಾಪೂಜಿ ಮಕ್ಕಳ ಆಸ್ಪತ್ರೆಯ ಡಾ. ಮೂಗನಗೌಡ ಪಾಟೀಲ್ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.

ಕಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ:

ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಇಂದು ತಮ್ಮ ಮನೆ ದೇವರು ಹಿರೇಹೆಮ್ಮಿಗನೂರು ಕಲ್ಲೇಶ್ವರ ಸ್ವಾಮಿ ಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಲ್ಲೇಶ್ವರ ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪುತ್ರಿ ಶ್ರೇಷ್ಠ ಶಾಮನೂರು ಮತ್ತಿತರರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment