ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶಾಮನೂರು ಶಿವಶಂಕರಪ್ಪ ಆರೋಗ್ಯ ವಿಚಾರಿಸಿದ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ

On: January 2, 2025 8:18 PM
Follow Us:
---Advertisement---

ದಾವಣಗೆರೆ: ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಿರಿಯ ರಾಜಕೀಯ ಮುತ್ಸದ್ದಿಗಳು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಡಾ. ಶಾಮನೂರು ಶಿವಶಂಕರಪ್ಪ ನವರನ್ನು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸುದೀರ್ಘ ಸಮಯ ಶ್ರೀಗಳು ಶಿವಶಂಕರಪ್ಪ ಹಾಗೂ ಅವರ ಕುಟುಂಬದ ಸದಸ್ಯರಾದ ಕರ್ನಾಟಕ ಸರ್ಕಾರದ ತೋಟಗಾರಿಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆದ ಎಸ್ ಎಸ್ ಮಲ್ಲಿಕಾರ್ಜುನ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಮರ್ಥ್ ಮಲ್ಲಿಕಾರ್ಜುನ್, ಶ್ರೇಷ್ಠ ಮಲ್ಲಿಕಾರ್ಜುನ್ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು.

ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಶಿವಶಂಕರಪ್ಪನವರಿಗೆ ನೂರಾರು ಕಾಲ ಆರೋಗ್ಯವಾಗಿರಿ ಎಂದು ಹರಸಿ ಆಶೀರ್ವಾದ ದಯಪಾಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ನಿವೃತ್ತ ಡೈರೆಕ್ಟರ್ ಜನರಲ್ ಮತ್ತು ಪೊಲೀಸ್ ಮಹಾ ನಿರೀಕ್ಷಕರು ಆಗಿದ್ದ ಶಂಕರ್ ಬಿದರಿ ಅವರು ಉಪಸಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment