ಶಿರಸಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿಂಗನಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಕೊಲೆಯಾದ ದುರ್ದೈವಿಯನ್ನು ಪರಮೇಶ್ವರ್ ನಾಯ್ಕ ಎಂದು ಗುರುತಿಸಲಾಗಿದೆ. ಮೃತ ಪರಮೇಶ್ವರ್ ಅವರ ಪತ್ನಿ ವರಸೆಯಲ್ಲಿ ತನಗೆ ಸಹೋದರನಾಗಬೇಕಿದ್ದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಷಯ ಪತಿಗೆ ತಿಳಿದಿತ್ತಾದರೂ, ಮಕ್ಕಳ ಭವಿಷ್ಯ ಮತ್ತು ಸಂಸಾರದ ಗೌರವದ ದೃಷ್ಟಿಯಿಂದ ಅವರು ಮೌನವಾಗಿದ್ದರು ಎನ್ನಲಾಗಿದೆ.
ಆದರೆ ಪತ್ನಿ ಹಾಗೂ ಆಕೆಯ ಪ್ರಿಯಕರನ ಕಾಮದ ಆಟಕ್ಕೆ ಪತಿ ಪರಮೇಶ್ವರ್ ಮುಳ್ಳಾಗಿದ್ದರು. ಹೀಗಾಗಿ ಇಬ್ಬರೂ ಸೇರಿ ಪರಮೇಶ್ವರ್ ಅವರನ್ನು ಶಿಂಗನಮನೆ ಗ್ರಾಮದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಭರದಿಂದ ತನಿಖೆ ಕೈಗೊಂಡಿದ್ದು, ಸದ್ಯ ಆರೋಪಿ ಪತ್ನಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.





Leave a comment