SUDDIKSHANA KANNADA NEWS/ DAVANAGERE/ DATE:31-12-2024
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಮೋಸ್ಟ್ ಬ್ಯಾಚುಲರ್. ಯಾವಾಗ ಮದುವೆ ಎಂಬ ಪ್ರಶ್ನೆ ಕೇಳಿ ಬರುತ್ತಲೇ ಇತ್ತು. ಆದ್ರೆ, ಈಗ ತೇಜಸ್ವಿ ಸೂರ್ಯ ಬದುಕಿನಲ್ಲಿ ಬಾಳು ಬೆಳಗುವ ವಧು ಸಿಕ್ಕಿದ್ದಾರೆ. ಅಂದ ಹಾಗೆ ಇವರ ಹೆಸರು ಸಿವಶ್ರೀ ಸ್ಕಂದ ಪ್ರಸಾದ್. ಚೆನ್ನೈ ಮೂಲದವರಾದ ಸಿವಶ್ರೀ ಸಿಂಗರ್ ಕೂಡ ಹೌದು.
ಶಾಸ್ತ್ರೀಯ ಸಂಗೀತ ಗಾಯಕಿಯೂ ಆಗಿರುವ ಸಿವಶ್ರೀ ಸ್ಕಂದ ಪ್ರಸಾದ್ ಖ್ಯಾತ ಭರತನಾಟ್ಯ ಕಲಾವಿದೆಯೂ ಹೌದು. ಬಿಟೆಕ್ ಪದವೀಧರೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಪದವಿ
ಪಡೆದಿರುವ ಇವರು ಯೂಟ್ಯೂಬ್ ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ.
ಸಿವಶ್ರೀ ಸ್ಕಂದ ಪ್ರಸಾದ್ ಅವರು ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿ ಪರಾಕಷ್ಟೆಗೆ ಸಾಕ್ಷಿಯಾಗಿತ್ತು ಎಂದು ಬರೆದುಕೊಂಡಿದ್ದರು.
ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ. ಇದರೊಂದಿಗೆ ಸೈಕ್ಲಿಂಗ್, ಟ್ರೆಕ್ಕಿಂಗ್ ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ. ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಮಾರ್ಚ್ 4 ರಂದು ಸಿವಶ್ರೀ ಜೊತೆ ಹಸೆಮಣೆ ಏರಲಿದ್ದಾರೆ ಎಂದು ಮೂಲಗಳು ಸ್ಪಷ್ಪಪಡಿಸಿವೆ. ಆದ್ರೆ, ತೇಜಸ್ವಿ ಸೂರ್ಯ ಮಾತ್ರ ಈ ಬಗ್ಗೆ ಇದುವರೆಗೆ ಏನನ್ನೂ ಹೇಳಿಲ್ಲ. ಜೊತೆಗೆ ಸಿವಶ್ರೀ ಸ್ಕಂದ ಅವರೂ ಪ್ರತಿಕ್ರಿಯೆ ನೀಡಿಲ್ಲ.