SUDDIKSHANA KANNADA NEWS/ DAVANAGERE/ DATE:07-06-2023
ದಾವಣಗೆರೆ(DAVANAGERE) : ಸ್ಮಾರ್ಟ್ ಸಿಟಿ (SMART CITY) ಕಾಮಗಾರಿ ಹಣ ಪಾವತಿ ತಡೆಯಿರಿ. ಸ್ಮಾರ್ಟ್ ಸಿಟಿ (SMART CITY) ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು ಕೆಲವು ಕಡೆ ಅವೈಜ್ಞಾನಿಕವಾಗಿ ಮತ್ತು ಗುಣಮಟ್ಟದ ಕೊರತೆಯುಳ್ಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಪರಿಶೀಲಿಸುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ತಡೆಹಿಡಿಯುವಂತೆ ಸೂಚನೆ ನೀಡಿದ್ದೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಸೂಚನೆ ನೀಡಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ (SMART CITY) ಯೋಜನೆಗೆ ನಾನು ಸಚಿವನಾಗಿದ್ದಾಗ ಅನುಮತಿ ಸಿಕ್ಕಿತ್ತು. ಆದ್ರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡಿರುವ ಕಾಮಗಾರಿಗಳು ಸಮರ್ಪಕವಾಗಿ
ನಡೆದಿಲ್ಲ. ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಹಾಗಾಗಿ, ಸ್ಮಾರ್ಟ್ ಸಿಟಿ (SMART CITY) ಕಾಮಗಾರಿ ನಡೆಸಿರುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯುವಂತೆ ಸೂಚನೆ ಕೊಟ್ಟಿದ್ದೇನೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ
ಜರುಗಿಸಲಾಗುವುದು ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ:
Blood Collection: ರಕ್ತ ಸಂಗ್ರಹ ಕೊರತೆ ಉಂಟಾಗಲು ನಾಲ್ಕು ಕಾರಣಗಳು ಯಾವುವು ಗೊತ್ತಾ…? ಬಾಂಬೆ ಒ ಪಾಸಿಟಿವ್ ದಾವಣಗೆರೆ (Davanagere) ಯಲ್ಲಿ ಎಷ್ಟು ಮಂದಿಯಲ್ಲಿದೆ ಗೊತ್ತಾ…?
https://suddikshana.com/lack-of-blood-supply-in-davanagere/
ಹಳೆ ಬಸ್ ನಿಲ್ದಾಣ (BUS STAND) ನಿರ್ಮಾಣ ಅವೈಜ್ಞಾನಿಕವಾಗಿದೆ. ನಮ್ಮ ಯೋಜನೆ ಇದ್ದದ್ದೇ ಬೇರೆ. ಬಿಜೆಪಿಯವರು ನಿರ್ಮಾಣ ಮಾಡಿರುವ ಬಸ್ ನಿಲ್ದಾಣವೇ ಬೇರೆಯಾಗಿದೆ. ಇಲ್ಲಿ ಬಸ್ ನಿಲುಗಡೆ ಮಾಡಲು ಜಾಗವಿಲ್ಲ. ಯಾವ ಮಾನದಂಡದ ಆಧಾರದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ ಎಂಬುದೇ ಗೊತ್ತಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿಯೂ ಸಾಕಷ್ಟು ಭ್ರಷ್ಟಾಚಾರ ಆಗಿದೆ. ಈ ಬಗ್ಗೆ ಮರು ಪರಿಶೀಲನೆ ನಡೆಸಲಾಗುವುದು. ಅವ್ಯವಹಾರ ಆಗಿದ್ದರೆ ಖಂಡಿತವಾಗಿಯೂ ತಪ್ಪಿತಸ್ಥರ ವಿರುದ್ಧ ಕ್ರಮ ಖಚಿತ. ನಾನು ಈ ಹಿಂದೆ ಕುಂದುವಾಡ
ಕೆರೆಗೆ ಭೇಟಿ ನೀಡಿದ್ದೆ. ಆಗ ಕಾಮಗಾರಿಗಳನ್ನು ಅವೈಜ್ಞಾನಿಕವಾಗಿ ಕೈಗೆತ್ತಿಕೊಂಡಿದ್ದರು. ಆಗಲೇ ಶೇಕಡಾ 40 ರಷ್ಟು ಕಮೀಷನ್ ಪಡೆಯುತ್ತಿದ್ದಾರೆ ಎಂದು ಹೇಳಿದ್ದೆ. ಯಾವೆಲ್ಲಾ ಕಾಮಗಾರಿಗಳನ್ನು ನಡೆಸಲಾಗಿದೆ, ಎಷ್ಟು ಖರ್ಚಾಗಿದೆ
ಎಂಬ ಕುರಿತಂತೆ ಸಮಗ್ರ ಮಾಹಿತಿ ಪಡೆದು ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು.
ಕಳೆದ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದ ಎಸ್. ಎಸ್. ಮಲ್ಲಿಕಾರ್ಜುನ್ ಮತ್ತೊಮ್ಮೆ ಸ್ಮಾರ್ಟ್ ಸಿಟಿ (SMART CITY) ಕಾಮಗಾರಿಯ ಹಣ ಬಿಡುಗಡೆಗೆ ತಡೆಯೊಡ್ಡಲಾಗಿದೆ ಎಂದು ಪುನರುಚ್ಚರಿಸಿದರು.
ಕೊಡಗನೂರು ಕೆರೆ ಕಳೆದ ಮುಂಗಾರಿನಲ್ಲಿ ಏರಿ ಕುಸಿದಿದ್ದು ಮೂರು ಭಾರಿ ಇದೇ ರೀತಿಯಾಗಿದೆ. ಆದರೆ ರಿಪೇರಿಗೆಂದು ಕೋಟ್ಯಾಂತರ ರೂ.ಗಳನ್ನು ವ್ಯಯ ಮಾಡಿದ್ದರೂ ಗುಣಮಟ್ಟದ ಕಾಮಗಾರಿ ಮಾಡಿಲ್ಲ, ಕೂಲಂಕುಷವಾಗಿ ಪರಿಶೀಲಿಸಲು
ಜಿಲ್ಲಾಧಿಕಾರಿಗೆ ಸಭೆಯ ವೇಳೆ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಸೂಚಿಸಿದ್ದರು.
smart-city-works-bill-payment-suspension, smart city work, smart city bills, ಸ್ಮಾರ್ಟ್ ಸಿಟಿ ಬಿಲ್ ಪಾವತಿಗೆ ತಡೆ, ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಖರ್ಚಾದ ಹಣದ ಬಗ್ಗೆ ಮಾಹಿತಿ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮ ಶಂಕೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಕಾರ್ಯಗಳಿಗೆ ತಗುಲಿರುವ ವೆಚ್ಚ ಎಷ್ಟು..?