SUDDIKSHANA KANNADA NEWS/ DAVANAGERE/ DATE:24-01-2025
ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈಗಾಗಲೇ 10 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲಾಗಿದೆ. ಪಾವಗಡ, ಶಿರಾ ಸುತ್ತಮುತ್ತ ಹೊಸದಾಗಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ.
ಜಮೀನು ಕೊಡಲು ರೈತರೇ ಮುಂದೆ ಬಂದಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡರೆ ಮೂರು ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಅದನ್ನು ಸಂಪೂರ್ಣ ಕೃಷಿಗೆ ವಿನಿಯೋಗಿಸಲು ಚಿಂತನೆ ನಡೆದಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಬೇಸಿಗೆ ಸಮೀಪಿಸುತ್ತಿದ್ದು, ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.