Home ದಾವಣಗೆರೆ ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ: ಪಂಚಾಯಿತಿ ಎದುರೇ ಸಮೃದ್ಧ ನೀರು ಕಂಡ ಬೋರ್‌ವೆಲ್!
ದಾವಣಗೆರೆಬೆಂಗಳೂರು

ಗ್ರಾಮದ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ: ಪಂಚಾಯಿತಿ ಎದುರೇ ಸಮೃದ್ಧ ನೀರು ಕಂಡ ಬೋರ್‌ವೆಲ್!

Share
ಗ್ರಾಮ
Share

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗುಡಾಳ್ ಗ್ರಾಮದಲ್ಲಿ ತೀವ್ರವಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಈಗ ಮುಕ್ತಿ ಸಿಕ್ಕಿದೆ. ಶಾಸಕ ಕೆ.ಎಸ್.ಬಸವಂತಪ್ಪ ಅವರ ವಿಶೇಷ ಕಾಳಜಿಯಿಂದಾಗಿ ಗ್ರಾಮದಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸಿದ್ದು, ಉತ್ತಮ ಪ್ರಮಾಣದ ನೀರು ಲಭ್ಯವಾಗಿದೆ.

ಸ್ಥಳ ಭೇಟಿ ಮತ್ತು ಪರಿಶೀಲನೆ: ಗ್ರಾಮದ ನೀರಿನ ಸಮಸ್ಯೆಯನ್ನು ಅರಿತ ಶಾಸಕ ಕೆ.ಎಸ್.ಬಸವಂತಪ್ಪ ಅವರು ಸ್ವತಃ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪಾಯಿಂಟ್ ಗುರುತಿಸಿ ಬೋರ್‌ವೆಲ್ ಕೊರಸಿ ಗ್ರಾಮದ ಜನರಿಗೆ ನೀರಿನ ಸಮಸ್ಯೆ ನೀಗಿಸಿದ್ದಾರೆ.

ಪಂಚಾಯಿತಿ ಎದುರೇ ನೀರು: ಗುಡಾಳ್ ಗ್ರಾಮದ ಪಂಚಾಯಿತಿ ಕಚೇರಿಯ ಮುಂಭಾಗದಲ್ಲೇ ಬೋರ್‌ವೆಲ್ ಕೊರೆಸಿದ್ದು, ಸುಮಾರು ಎರಡು ಇಂಚಿನಷ್ಟು ಭರಪೂರ ನೀರು ಬಂದಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ.

ಕೇವಲ ಗುಡಾಳ್ ಮಾತ್ರವಲ್ಲದೆ, ಸುತ್ತಮುತ್ತಲಿನ ಕದರಪ್ಪನಹಟ್ಟಿ, ಗುಡಾಳ್ ಗೊಲ್ಲರಹಟ್ಟಿ ಹಾಗೂ ಕೆಂಚಮ್ಮನಹಳ್ಳಿ ಸೇರಿದಂತೆ ಹಲವು ಹಳ್ಳಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣವೇ ಬೋರ್‌ವೆಲ್ ಕೊರೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ.

ಈ ಬಾರಿಯ ತಾಪಮಾನ ಹೆಚ್ಚಳದಿಂದ ಕ್ಷೇತ್ರದ ವ್ಯಾಪ್ತಿಯ ಸಾಕಷ್ಟು ಗ್ರಾಮಗಳಲ್ಲಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಕ್ಷೇತ್ರದ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ತಕ್ಷಣವೇ ಸೂಕ್ತ ಜಾಗದಲ್ಲಿ ಬೋರ್‌ವೆಲ್ ಕೊರೆಸಿ ಕುಡಿಯುವ ನೀರು ಪೂರೈಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದರೊಂದಿಗೆ ಖಾಸಗಿ ಕೊಳವೆಬಾವಿಗಳಿಂದ ನೀರು ಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುವಂತೆ ಎಲ್ಲಾ ಗ್ರಾಮಗಳಲ್ಲಿ ನಾಲ್ಕು ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಇದೇ ವೇಳೆ ಶಾಸಕ ಕೆ.ಎಸ್. ಬಸವಂತಪ್ಪ ಅವರ ಕಾರ್ಯ ವೈಖರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಅಣಜಿ ಚಂದ್ರಣ್ಣ, ಗ್ರಾಮದ ಮುಖಂಡರಾದ ಕಲ್ಲೇಶ್, ಶಿವಣ್ಣ, ಈಶ್ವರ್, ವೆಂಕಟೇಶ್, ಕರಿಯಪ್ಪ, ಪ್ರಕಾಶ್, ಪಿಡಿಒ ಸುರೇಶ್, ಗ್ರಾಪಂ ಆಡಳಿತಾಧಿಕಾರಿ ಮಲ್ಲೇಶ್ ನಾಯ್ಕ್, ಎಂಜಿನಿಯರ್ ಆಸ್ಮಾ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಬೇಸಿಗೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ.

-ಕೆ.ಎಸ್.ಬಸವಂತಪ್ಪ, ಶಾಸಕ.

Share

Leave a comment

Leave a Reply

Your email address will not be published. Required fields are marked *