Home ನವದೆಹಲಿ ಸಿಎಂ ಹಂಚಿಕೆ ಬಿಕ್ಕಟ್ಟು “ಸೋನಿಯಾ, ರಾಹುಲ್ ಮತ್ತು ನಾನು ಸರಿಪಡಿಸುತ್ತೇವೆ”: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ನುಡಿ!
ನವದೆಹಲಿಬೆಂಗಳೂರು

ಸಿಎಂ ಹಂಚಿಕೆ ಬಿಕ್ಕಟ್ಟು “ಸೋನಿಯಾ, ರಾಹುಲ್ ಮತ್ತು ನಾನು ಸರಿಪಡಿಸುತ್ತೇವೆ”: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ನುಡಿ!

Share
ಮಲ್ಲಿಕಾರ್ಜುನ ಖರ್ಗೆ
Share

SUDDIKSHANA KANNADA NEWS/DAVANAGERE/DATE:26_11_2025

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಂಬಂಧ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯನ್ನಾಗಿ ಮುಂದುವರಿಸಲು ಒಂದು ಬಣ ಸಜ್ಜಾಗಿದ್ದರೆ, ಮತ್ತೊಂದು ಬಣ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲೇಬೇಕೆಂಬ ಒತ್ತಡ ಹಾಕುತ್ತಲೇ ಇದೆ.

ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರಿಗೆ ಬಂದಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸುಮ್ಮನಿದ್ದರು. ದೆಹಲಿಗೆ ಹೋಗುತ್ತಿದ್ದಂತೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಭೇಟಿ ಮಾಡಿದ ಬಳಿಕ ವಿಪಕ್ಷ ನಾಯಕ ರಾಹುಲ್ ಗಾಂಧಿ ವೆಯ್ಟ್… ಐ ಕಾಲ್ ಯು ಲೇಟರ್ ಎಂಬ ಸಂದೇಶ ಡಿ. ಕೆ. ಶಿವಕುಮಾರ್ ಗೆ ರವಾನಿಸಿದ್ದರು. ಒಂದು ಹೆಜ್ಜೆ ಮುಂದೆ ಹೋಗಿರುವ ಮಲ್ಲಿಕಾರ್ಜುನ್ ಖರ್ಗೆ ಕರ್ನಾಟಕದ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದು, ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಬಹಿರಂಗ ರಹಸ್ಯ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ದೃಢಪಡಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಹಗ್ಗಜಗ್ಗಾಟ ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ತಿಳಿಸಿದರು.

“ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾನು ಅದನ್ನು ಸರಿಪಡಿಸುತ್ತೇವೆ ಎಂದು ಪ್ರಮುಖ ವಿಷಯಗಳಲ್ಲಿ ಪ್ರಭಾವಿ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles