Site icon Kannada News-suddikshana

ಆಪತ್ತು, ತುರ್ತು ವೇಳೆ ಬಳಸಿ ದಾವಣಗೆರೆ ಸುರಕ್ಷಾ ಆಪ್: ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುವಂತೆ ಕಾಲೇಜು ಪ್ರಾಂಶುಪಾಲರಿಗೆ ಎಸ್ಪಿ ಉಮಾ ಪ್ರಶಾಂತ್ ಸೂಚನೆ

SUDDIKSHANA KANNADA NEWS/ DAVANAGERE/ DATE:03-03-2024

ದಾವಣಗೆರೆ: ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ನಗರದ ಎಲ್ಲಾ ಪಿಯು ಮತ್ತು ಪದವಿ ಕಾಲೇಜುಗಳ ಪ್ರಾಂಶುಪಾಲರುಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಸಭೆ ನಡೆಸಿ ಅಹವಾಲು ಆಲಿಸಿದರು. ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಪಿಯು ಮತ್ತು ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು ಕಾಲೇಜು ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಪೊಲೀಸ್ ತುರ್ತು ಸೇವೆಗಾಗಿ ತುರ್ತು ಸಹಾಯವಾಣಿ 112 ಇದ್ದು, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ತುರ್ತು ಸೇವೆಗಾಗಿ 112 ಗೆ ಕರೆ ಮಾಡುವಂತೆ ಸಲಹೆ ನೀಡಿದರಲ್ಲದೇ, ಅಗತ್ಯವಿದ್ದರೆ ನೇರವಾಗಿ
ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಲು ತಿಳಿಸಿದರು.

ದಾವಣಗೆರೆ ನಗರದಲ್ಲಿ ತುರ್ತು ಸೇವೆಗಾಗಿ “ದಾವಣಗೆರೆ ಸುರಕ್ಷಾ” ಆಪ್ ಅನ್ನು ಜಾರಿಗೆ ತಂದಿದ್ದು, ನಗರದ ವ್ಯಾಪ್ತಿಯಲ್ಲಿ ಯಾವುದೇ ಆಪತ್ತಿನ ಸಮಯದಲ್ಲಿ ಹಾಗೂ ಇತರೆ ತುರ್ತು ಸೇವೆಗೆ ಬಳಸಬಹುದಾಗಿರುತ್ತದೆ ಎಂದು ಉಮಾ ಪ್ರಶಾಂತ್ ಅವರು ಮಾಹಿತಿ ನೀಡಿದರು.

ಪ್ರಾಂಶುಪಾಲರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಬೇಕು. ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿ ತಮ್ಮ ಮಕ್ಕಳ ನಡೆ ನುಡಿಗಳ ಬಗ್ಗೆ ಅವರ ಅಭ್ಯಸಗಳ ಬಗ್ಗೆ ನಿಗಾ ವಹಿಸುವಂತೆ ಸೂಕ್ತ ತಿಳುವಳಿಕೆ ನೀಡಲು ತಿಳಿಸಿದರು.

ಕಾಲೇಜು ಆವರಣ, ಕ್ಯಾಂಪಸ್ ನಲ್ಲಿ ಅನಾವಶ್ಯಕವಾಗಿ ಹೊರಗಿನ ವ್ಯಕ್ತಿಗಳಿಗೆ ಪ್ರವೇಶಿಸದಂತೆ ಗಮನಹರಿಸಿಬೇಕು. ಈ ಬಗ್ಗೆ ಪ್ರಾಂಶುಪಾಲರುಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.  ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿನ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ. ಸಂತೋಷ್. ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ದಾವಣಗೆರೆ ನಗರದ ಎಲ್ಲಾ ಪಿಯು ಮತ್ತು ಪದವಿ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

Exit mobile version