SUDDIKSHANA KANNADA NEWS/ DAVANAGERE/ DATE:14-03-2024
ದಾವಣಗೆರೆ: ಮುಂದಿನ ಕೆಲವೇ ದಿನಗಳಲ್ಲಿ ಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಆದ್ದರಿಂದ ನಾವುಗಳು ಈ ಹಬ್ಬಗಳನ್ನು ಮಾಡುವ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಗೆಯಾಗಬಹುದು. ಈ ನಿಟ್ಟಿನಲ್ಲಿ ಸಂಹಿತೆ ಜಾರಿ ಆಗಿದ್ದಾಗ ಚುನಾವಣೆಗೆ ಸಂಬಂಧಪಟ್ಟ ನಿಯಮಗಳು ಇರುತ್ತವೆ. ಅವುಗಳನ್ನು ನಾವೆಲ್ಲರೂ ಕೂಡ ಕಟ್ಟುನಿಟ್ಟಿನಿಂದ ಪಾಲಿಸಬೇಕು. ನೀತಿ ಸಂಹಿತೆಗೆ ಅನುಗುಣವಾಗಿ ಆಚರಣೆ ಮಾಡಬೇಕಾಗುತ್ತದೆ ಎಂದು ಎಸ್ಪಿ
ಉಮಾ ಪ್ರಶಾಂತ್ ಹೇಳಿದರು.
ಅವರು ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗದಲ್ಲಿ ಮುಂಬರುವ ದುರ್ಗಾಂಬ ಜಾತ್ರೆ, ಹೋಳಿ ಹಬ್ಬಗಳ ಹಿನ್ನಲೆಯಲ್ಲಿ ನಡೆಸಲಾದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಬ್ಬಗಳನ್ನು ನಾವೆಲ್ಲರೂ ಸೌಹಾರ್ದತೆ, ಸಂಬಂಧ, ಮತ್ತು ಬಾಂಧವ್ಯಗಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಆಚರಣೆ ಮಾಡಲಿದ್ದು ಇದಕ್ಕೆ ಪೂರಕವಾಗಿ ಕಾನೂನು ಪಾಲನೆ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಬೇಕೆಂದು ಜಿಲ್ಲಾ
ರಕ್ಷಣಾಧಿಕಾರಿ ಉಮಾ ಪ್ರಶಾಂತ ತಿಳಿಸಿದರು.
ಈ ನಾಲ್ಕು ಹಬ್ಬಗಳು ವಿಶೇಷವಾಗಿ ನಡೆಯುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ನಾವು ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣೆ ಮಾಡಲು ಪ್ರತಿ ಠಾಣಾ ಮತ್ತು ಜಿಲ್ಲಾ ಕಚೇರಿಯಲ್ಲಿ ಕೂಡ ಇದನ್ನು ಅಳವಡಿಸಲಾಗಿದೆ. ಆದ್ದರಿಂದ ಯುವಕರು, ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನೆ ನೀಡುವ ಪೋಸ್ಟ್ ಹಾಕುವುದಾಗಲಿ ಅಥವಾ ಫೇಕ್ ನ್ಯೂಸ್ ಮಾಡುವುದಾಗಲಿ ಅಥವಾ ಇನ್ಯಾವುದೇ ಅಚಾತುರ್ಯ ಘಟನೆಗಳನ್ನಾಗಲಿ ಮಾಡಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿ ಅಪಾರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ ಸಂತೋಷ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಅಭಿಷೇಕ್,
ಜಿಲ್ಲಾ ವಿಶೇಷ ವಿಭಾಗ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ್ಕೆ ವಾಸಂತಿ ಉಪ್ಪಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ಇನ್ನಿತರರು ಉಪಸ್ಥಿತರಿದ್ದರು.