SUDDIKSHANA KANNADA NEWS/ DAVANAGERE/ DATE:25-02-2025
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕರ ವಾಹನ ಚಾಲನೆಗೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ಬೈಕ್ ಚಾಲನೆ ಹೆಚ್ಚಾದ ಕಾರಣ ಕಟ್ಟುನಿಟ್ಟಿನ ಕ್ರಮಕ್ಕೆ ಕ್ರಮ ಕೈಗೊಳ್ಳುತ್ತಿದ್ದು, ವಾಹನ ಮಾಲೀಕರಿಗೆ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ನೀಡುತ್ತಿದೆ.
ದಾವಣಗೆರೆ ಸೇರಿದಂತೆ ಎಲ್ಲಾ ತಾಲೂಕಿನಲ್ಲಿಯೂ ತಪಾಸಣೆ ಬಿಗಿಗೊಳಿಸಲಾಗಿದೆ. ಸಂತೇಬೆನ್ನೂರಿನಲ್ಲಿ ಅಪ್ರಾಪ್ತ ಬಾಲಕ ವಾಹನ ಚಾಲನೆ ಮಾಡಿದ್ದು, ವಾಹನ ಮಾಲೀಕರಿಗೆ 25,000 ರೂಪಾಯಿ ದಂಡ ವಿಧಿಸಲಾಗಿದೆ.
ಸಂತೇಬೆನ್ನೂರು ಪೊಲೀಸ್‌ಠಾಣಾ ವ್ಯಾಪ್ತಿಯ ಸಂತೇಬೆನ್ನೂರು ಪಟ್ಟಣದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರ ಸೂಚನೆಯಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್‌ರವರು ಮತ್ತು ಮಂಜುನಾಥ್, ಚನ್ನಗಿರಿ ಸಹಾಯಕ ಪೊಲೀಸ್‌ಅಧೀಕ್ಷಕ ಶ್ಯಾಮ್ ವರ್ಗೀಸ್‌ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಕಳೆದ ಫೆಬ್ರವರಿ 21ರಂದು ಬೆಳಗ್ಗೆ 10.30ರ ಸಮಯದಲ್ಲಿ ಸಂತೇಬೆನ್ನೂರು ಪೊಲೀಸ್‌ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ನೇತೃತ್ವದಲ್ಲಿ ಸಂತೇಬೆನ್ನೂರು ಠಾಣಾ ಪಿಎಸ್ಐಗಳಾದ ಜಗದೀಶ್ ಜಿ. ಮತ್ತು ಚನ್ನವೀರಪ್ಪ ಹಾಗು ಸಿಬ್ಬಂದಿಯಾದ ಹೊನ್ನೂರು ಸ್ವಾಮಿ ಅವರು ಸಂತೇಬೆನ್ನೂರು ಪಟ್ಟಣದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಸಂತೇಬೆನ್ನೂರು ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಅಪ್ರಾಪ್ತ ಬಾಲಕ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಓಡಿಸುತ್ತಿದ್ದ. ಪೊಲೀಸರನ್ನು ನೋಡುತ್ತಿದ್ದಂತೆ ಬೈಕ್ ಬಿಟ್ಟು ಓಡಿ ಹೋಗಿದ್ದ. ಠಾಣೆಗೆ ಬೈಕ್ ತಂದು ವಿಳಾಸ ಪತ್ತೆ ಮಾಡಿದ್ದು, ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ಬೈಕ್ ನೀಡಿದ್ದರ ಬಗ್ಗೆ ಬೈಕ್ ಮಾಲೀಕನ ವಿರುದ್ಧ 2 ನೇಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ಚನ್ನಗಿರಿ ನ್ಯಾಯಾಲಯಕ್ಕೆ ಬೈಕ್ ಮಾಲೀಕ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪ್ರಸನ್ನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ನ್ಯಾಯಾಲಯವು ಫೆ. 24ರಂದು ಪ್ರಸನ್ನರಿಗೆ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಚಾಲನೆ ಮಾಡಲುಕೊಟ್ಟಿದ್ದಕ್ಕೆ ನ್ಯಾಯಾಲಯವು 25,000 ರೂಪಾಯಿ ದಂಡ ವಿಧಿಸಿದೆ.
ಪೊಲೀಸರ ಎಚ್ಚರಿಕೆ:
ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲುಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಪೊಲೀಸ್ ನವರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ. ಇದೇರೀತಿ ಸಂಚಾರ ನಿಯಮಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮಜರುಗಿಸಲಾಗುವುದು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಸ್ಪಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ.