ಮೈಸೂರು: ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಘೋಷಣೆ ಇದೆ. ಕಾದು ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಸ್ಪೆನ್ಸ್ ಆಗಿಯೇ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯರು, ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಬಳ್ಳಾರಿ ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚೆ
ಬಳ್ಳಾರಿ ಘಟನೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದರು.
ಎಚ್. ಡಿ ಕುಮಾರಸ್ವಾಮಿ ರಾಜಕೀಯವಾಗಿ ಮಾತನಾಡುತ್ತಾರೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಮಾಡಿರುವ ಆರೋಪಗಳ ಪ್ರತಿಕ್ರಿಯೆ ನೀಡಿ ಜೆಡಿಎಸ್ ಹಾಗೂ ಬಿಜೆಪಿ ಕಾನೂನಿನ ರೀತಿ ಮಾತನಾಡದೆ ರಾಜಕೀಯವಾಗಿ ಮಾತನಾಡುತ್ತಾರೆ ಎಂದರು.
ಸೌಹಾರ್ದ ಭೇಟಿ
ನಿನ್ನೆ ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆಯ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು ಎಂದರು.
ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದಾಗ ಮಾತನಾಡುವುದಾಗಿ ಸಿಎಂ ತಿಳಿಸಿದರು.





Leave a comment