Home ದಾವಣಗೆರೆ ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್
ದಾವಣಗೆರೆನವದೆಹಲಿಬೆಂಗಳೂರು

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್

Share
Share

SUDDIKSHANA KANNADA NEWS/DAVANAGERE/DATE:09_12_2025

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ.

ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮ ಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆ ಯನ್ನು ಪಾರದರ್ಶಕತೆ ಹಾಗೂ ಜನ ಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶ ವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

Share

Leave a comment

Leave a Reply

Your email address will not be published. Required fields are marked *