SUDDIKSHANA KANNADA NEWS/DAVANAGERE/DATE:23_11_2025
ದಾವಣಗೆರೆ: ದಾವಣಗೆರೆ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳನ್ನು ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹಾಗೂ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
READ ALSO THIS STORY: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೊರಟಿದ್ದೀರಾ… ಹಾಗಾದ್ರೆ ಈ ಸುರಕ್ಷತೆ ಕೈಗೊಳ್ಳಲೇಬೇಕು!
ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ನಿರ್ದೇಶಕ ಡಾ|| ಜಯಂತ್ ಡಿ. ಎಸ್. ಅವರು ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಉಪನಿರ್ದೇಶಕ ಪಳನಿವೇಲು ಡಿ. ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಅಧ್ಯಕ್ಷ ಎನ್. ಓಹಿಲೇಶ್ವರ, ಕಾರ್ಯದರ್ಶಿ ಜೆ. ಶಿವಪ್ಪ, ಪ್ರಾಚಾರ್ಯರಾದ ಆರ್. ಸುರೇಶ, ವಾಣಿಶ್ರೀ ಹಾಜರಿದ್ದರು.
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಹಂತದ 11 ವಿವಿಧ ಸ್ಪರ್ಧೆಗಳಿಗೆ ದಾವಣಗೆರೆ ಜಿಲ್ಲೆಯ 41 ಪದವಿ ಪೂರ್ವ ಕಾಲೇಜುಗಳಿಂದ ಸುಮಾರು 580 ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಜರುಗಿತು. ಈ ಸಮಾರಂಭದಲ್ಲಿ ಡಿ. ಪಳನಿವೇಲು ಮಾಕತನಾಡಿ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಅಭ್ಯಾಸ ಮಾಡಲು ಹಲವು ದಾರಿಗಳಿದ್ದು, ಸರ್ಕಾರವು ವಿವಿಧ ಅವಕಾಶಗಳನ್ನು ಕಲ್ಪಿಸಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ವಿಜೇತ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎನ್ನುವುದರ ಕುರಿತು ಸೂಕ್ತ ಸಲಹೆ ನೀಡಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಡಿ. ಎಸ್. ಹೇಮಂತ್, ಗಾಯಿತ್ರಿ ಚಿಮ್ಮಡ್, ವಾಣಿಶ್ರೀ, ಸುರೇಶ ಆರ್, ಶಿವಪ್ಪ ಜೆ, ಭೀಮ ಕುಮಾರ ಜೆ.ವಿ. ಅವರೂ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮುಂದಿನ ಹಂತಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ದಾವಣಗೆರೆ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾರ್ಥಿಗಳಲ್ಲಿ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದ್ವಿತೀಯ ಪಿಯುಸಿ ಹಂತದಲ್ಲಿ ಭಾವಗೀತೆ ಸ್ಪರ್ಧೆಯಲ್ಲಿ ವರುಣ ಎಂ ಹಾಗೂ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಉಷಾರಾಣಿ ಎಂ, ಪ್ರಥಮ ಸ್ಥಾನ ಪಡೆದರೆ, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಕವನ ಕೆ ಎನ್, ಆಂಗ್ಲ ಮಾಧ್ಯಮ ಪ್ರಬಂಧ ಸ್ಪರ್ಧೆಯಲ್ಲಿ ಸಿಂಧು ಡಿ ಜಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಆಂಗ್ಲ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ಅನುಷಾ ಕೆ ಎಸ್ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಣವ್ ದಿಗ್ಗಾವಿ ಹಾಗೂ ಅನಂತಸೇನ ಬಿ ಎಂ ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಥಮ ಪಿಯುಸಿಯ ಹಂತದಲ್ಲಿ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಎಂ ನಾಡಿಗರ್, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಶಶಾಂಕ ಈರಪ್ಪ ತೆಪ್ಪದ್, ಕನ್ನಡ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ವೇದ ಪ್ರಕಾಶ್ ಅಜ್ಜಂನವರ್, ಆಂಗ್ಲ ಮಾಧ್ಯಮ ಚರ್ಚಾ ಸ್ಪರ್ಧೆಯಲ್ಲಿ ಹುಸ್ನ ಎನ್. ಅವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ಸಂಚಾಲಕ ಡಾ ಧನಂಜಯಪ್ಪ ಬಿ ಎನ್, ಸದಾಶಿವ ಹೊಳ್ಳ, ಸಂತೋಷ್ ಎಸ್ ಹಾಗೂ ಎಲ್ಲಾ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.





Leave a comment