SUDDIKSHANA KANNADA NEWS/ DAVANAGERE/ DATE:11-04-2025
ದಾವಣಗೆರೆ: ನಗರದ ಹೇಳೇ ಭಾಗದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ಕೆಂಡೋತ್ಸವ ಹಾಗೂ ರಥೋತ್ಸವ ಕಾರ್ಯಕ್ರಮ ನಡೆಯಿತು.
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರು ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕುಟುಂಬ ಸಮೇತರಾಗಿ ಭಾಗಿಯಾದರು.
ಸಚಿವರು ಕೆಂಡವನ್ನು ತುಳಿದು ಪ್ರತಿ ವರ್ಷದಂತೆ ಹರಕೆ ಸಲ್ಲಿಸಿದರು. ಸಚಿವರೊಂದಿಗೆ ಅವರ ಪುತ್ರ ಸಮರ್ಥ ಶಾಮನೂರು ಅವರು ಸಹ ಕೆಂಡವನ್ನು ತುಳಿದು ಭಕ್ತಿ ಸಮರ್ಪಿಸಿದರು.
ಈ ವೇಳೆ ದೇವಸ್ಥಾನದ ಸಮಿತಿಯವರು ಸೇರಿದಂತೆ ಹಲವರಿದ್ದರು.