Home ದಾವಣಗೆರೆ ಎಸ್. ಎಸ್. ಮಲ್ಲಿಕಾರ್ಜುನ್ ಗೆ ಡಿಸಿಎಂ ಹಾಗೂ ಸಚಿವ ಸ್ಥಾನ ನೀಡಿ: ಕವಿತಾ ಚಂದ್ರಶೇಖರ್ ಆಗ್ರಹ
ದಾವಣಗೆರೆನವದೆಹಲಿಬೆಂಗಳೂರು

ಎಸ್. ಎಸ್. ಮಲ್ಲಿಕಾರ್ಜುನ್ ಗೆ ಡಿಸಿಎಂ ಹಾಗೂ ಸಚಿವ ಸ್ಥಾನ ನೀಡಿ: ಕವಿತಾ ಚಂದ್ರಶೇಖರ್ ಆಗ್ರಹ

Share
ಎಸ್. ಎಸ್. ಮಲ್ಲಿಕಾರ್ಜುನ್
Share

ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಬೇಕಾಗಿದ್ದು, ಎಸ್. ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡುವ ಜೊತೆಗೆ ಡಿಸಿಎಂ ಹುದ್ದೆ ಕೊಡಬೇಕು ಎಂದು ದಾವಣಗೆರೆ ಕಾಂಗ್ರೆಸ್ ನಾಯಕಿ ಕವಿತಾ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮೂರು ಬಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಲವು ಯೋಜನೆಗಳು, ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು ವಿಶ್ವದ ಭೂಪಟದಲ್ಲಿ ದಾವಣಗೆರೆ ಗುರುತಿಸುವಂತೆ ಮಾಡಿದ್ದಾರೆ. ಇಂದು ದಾವಣಗೆರೆಯು ಅಭಿವೃದ್ಧಿಯತ್ತ ಸಾಗಲು ಶಾಮನೂರು ಕುಟುಂಬದವರೇ ಕಾರಣ. ಶಾಮನೂರು ಶಿವಶಂಕರಪ್ಪರು ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮೊದಲ ಹಂತದಲ್ಲೇ ಸಂಪುಟಕ್ಕೆ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸೇರ್ಪಡೆಯಾಗಬೇಕಾಗಿತ್ತು. ಆದರೆ ಆಗಿಲ್ಲ. ಎರಡನೇ ಹಂತದ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

1999ರಲ್ಲಿ ಎಸ್. ಎಂ. ಕೃಷ್ಣ ಸಚಿವ ಸಂಪುಟ, 2013ರಲ್ಲಿ ಸಿದ್ದರಾಮಯ್ಯರು ಸಿಎಂ ಆಗಿದ್ದಾಗ ತೋಟಗಾರಿಕೆ ಸಚಿವರಾಗಿದ್ದ ಎಸ್. ಎಸ್. ಮಲ್ಲಿಕಾರ್ಜುನ್ ಅವರು 2023ರಲ್ಲಿ ಸಿದ್ದರಾಮಯ್ಯರು ಮತ್ತೆ ಮುಖ್ಯಮಂತ್ರಿಯಾದಾಗ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕಿತ್ತು. ಅದೇ ರೀತಿಯಲ್ಲಿ ಸಚಿವ ಸ್ಥಾನವನ್ನೂ ನೀಡಬೇಕಿತ್ತು. ಹೈಕಮಾಂಡ್ ನಾಯಕರು ಎರಡನೇ ಹಂತದ ಸಂಪುಟದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಬೆಳೆಸಿದ ಕೀರ್ತಿ ಶಾಮನೂರು ಶಿವಶಂಕರಪ್ಪರು, ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಸಲ್ಲುತ್ತದೆ. ಸಮರ್ಥ್ ಶಾಮನೂರು ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬಂದಿರುವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾದರೆ ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಸಾಗಲಿದೆ. ಸಚಿವ ಸ್ಥಾನ ನೀಡಬೇಕೆಂಬುದು ಎಲ್ಲರ ಒತ್ತಾಸೆಯಾಗಿದೆ. ಹೈಕಮಾಂಡ್ ಇದಕ್ಕೆ ಮನ್ನಣೆ ಕೊಟ್ಟು ಸಚಿವ ಸ್ಥಾನವನ್ನು ಮಲ್ಲಿಕಾರ್ಜುನ್ ಅವರಿಗೆ ನೀಡಲೇಬೇಕು ಎಂದು ಕವಿತಾ ಚಂದ್ರಶೇಖರ್ ಅವರು ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles