SUDDIKSHANA KANNADA NEWS| DAVANAGERE| DATE:03-06-2023
ದಾವಣಗೆರೆ(DAVANAGERE): ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕೆ ಸಚಿವರಾದ ಬಳಿಕ ದಾವಣಗೆರೆಗೆ ಆಗಮಿಸಿದ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಸಾವಿರಾರು ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ರೋಡ್ ಶೋ (ROAD SHOW) ಹಾಗೂ ಬೈಕ್ ರ್ಯಾಲಿ (BIKE RALLY) ನಡೆಯಿತು.
ದಾವಣಗೆರೆ ಉತ್ತರ (DAVANAGERE NORTH) ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್ ಅವರು 3ನೇ ಬಾರಿಗೆ ಸಚಿವರಾಗಿ ಸ್ವೀಕರಿಸಿ ಅಧಿಕಾರ ಸ್ವೀಕರಿಸಿದ ಬಳಿಕ ಮಧ್ಯಾಹ್ನ 4.30ರ ಸುಮಾರಿಗೆ ಆಗಮಿಸಿದ ಎಸ್ ಎಸ್ ಎಂ ಅವರನ್ನು ಆತ್ಮೀಯವಾಗಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಬರ ಮಾಡಿಕೊಂಡರು.
ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರನ್ನು ಸ್ವಾಗತಿಸಿ ಬೈಕ್ ರ್ಯಾಲಿ ಮೂಲಕ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಮೆರವಣಿಗೆಯು ದಾವಣಗೆರೆ ಜಿಲ್ಲಾ ಪಂಚಾಯತ್ ಮುಂಭಾಗ ಪ್ರಾರಂಭವಾಗಿ ಗಣೇಶ ದೇವಸ್ಥಾನ ಹದಡಿ ರಸ್ತೆ, ಐ.ಟಿ.ಐ. ಕಾಲೇಜ್ ಮುಂಭಾಗದಿಂದ 60 ಅಡಿ ರಸ್ತೆಯ ಮೂಲಕ ನಿಟುವಳ್ಳಿ ದುರ್ಗಾಂಬಿಕ ಸರ್ಕಲ್, ನಿಟುವಳ್ಳಿ, ಆರ್.ಎಸ್. ಶೇಖರಪ್ಪನವರ ಮನೆ ಮುಂಭಾಗ, ಕೊಂಡಜ್ಜಿ ಬಸಪ್ಪ ಸರ್ಕಲ್ ಹದಡಿ ರಸ್ತೆ, ವಿದ್ಯಾರ್ಥಿ ಭವನ ಸರ್ಕಲ್, ಹದಡಿ ರಸ್ತೆ, ಕೆ.ಇ.ಬಿ. ಸರ್ಕಲ್, (ಅಂಬೇಡ್ಕರ್ ಸರ್ಕಲ್) ಹದಡಿ ರಸ್ತೆ, ಜಯದೇವ ಸರ್ಕಲ್, ಮಹಾನಗರ ಪಾಲಿಕೆ ಕಛೇರಿ ಮುಂಭಾಗದಿಂದ ಅರುಣ್ ಸರ್ಕಲ್ ಮುಖಾಂತರ ರೈಲ್ವೆಗೇಟ್ ಮುಖಾಂತರ ಹೊಂಡದ ಸರ್ಕಲ್, ದುರ್ಗಾಂಬಿಕ ದೇವಸ್ಥಾನ ಶಿವಾಜಿ ವೃತ್ತ, ಹಗೇದಿಬ್ಬ ಸರ್ಕಲ್, ಅಜಾದ್ನಗರ ಮುಖ್ಯರಸ್ತೆ, ಅರಳಿಮರ ಸರ್ಕಲ್, ವೆಂಕಟೇಶ್ವರ ಸರ್ಕಲ್ ನಲ್ಲಿ ಮುಕ್ತಾಯ ಆಯಿತು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಚನ್ನಗಿರಿಯ ಶಾಸಕ ಶಿವಗಂಗಾ ಬಸವರಾಜ್, ಹೊನ್ನಾಳಿ ಶಾಸಕ ಡಿ. ಜಿ. ಶಾಂತನಗೌಡ, ಜಗಳೂರು ಶಾಸಕ ದೇವೇಂದ್ರಪ್ಪ, ಹರಪನಹಳ್ಳಿಯ ಶಾಸಕಿ ಲತಾ ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮಲ್ಲಿಕಾರ್ಜುನ್ ಅವರು 1998ರಿಂದ ಶಾಸಕರಾಗಿ, 2 ಬಾರಿ ಸಚಿವರಾಗಿ ದಾವಣಗೆರೆ ಜಿಲ್ಲೆಯನ್ನು ದೇಶ ತಿರುಗಿ ನೋಡುವಂತೆ ಅಭಿವೃದ್ಧಿ ಮಾಡಿದ್ದರು. ಇದೀಗ 3ನೇ ಬಾರಿಗೆ ಸಚಿವರಾಗಿದ್ದು, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದಾರೆ.