ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರ್ನಾಟಕದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಬದ್ದ; ಎಸ್. ಎಸ್. ಮಲ್ಲಿಕಾರ್ಜುನ್

On: November 1, 2024 5:40 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-11-2024

ದಾವಣಗೆರೆ: ಕರ್ನಾಟಕ ರಾಜ್ಯ ವೈವಿಧ್ಯತೆಗಳನ್ನು ಹೊಂದಿರುವ ಹಲವು ಜಗತ್ತುಗಳ ಒಂದು ರಾಜ್ಯ, ಇಲ್ಲಿನ ಸರ್ವ ಜನಾಂಗದ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 69 ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

1956 ರಲ್ಲಿ ಏಕೀಕರಣಗೊಂಡ ಮೈಸೂರು ರಾಜ್ಯವನ್ನು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಈಗಾಗಲೇ ನಾಮಕರಣವಾಗಿ 50 ವರ್ಷಗಳನ್ನು ಪೂರೈಸಿದ್ದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮೊಟ್ಟ ಮೊದಲ ಹಲ್ಮಿಡಿ ಶಿಲಾಶಾಸನದ ಪ್ರತಿಕೃತಿಯನ್ನು ಪ್ರತಿಷ್ಟಾಪಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮದ ಅಂಗವಾಗಿ ನಾಡಿನಾದ್ಯಂತ ಹಲವಾರು ಕನ್ನಡ ಪರ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು ದಾವಣಗೆರೆ ನಗರದ ಗಾಜಿನಮನೆಯ ಆವರಣದಲ್ಲಿ ನವೆಂಬರ್ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕರ್ನಾಟಕ ರಾಜ್ಯೋತ್ಸವ ಸಮಸ್ತ ಕನ್ನಡಿಗರ ಹಬ್ಬ, ಇದು ನಮ್ಮ ನಾಡು-ನುಡಿ, ಹಿರಿಮೆ-ಗರಿಮೆ ಗಳನ್ನು ಮೆಲುಕು ಹಾಕುವ ಸಾಂಸ್ಕೃತಿಕ ಉತ್ಸವವಾಗಿದೆ. ಕಾವೇರಿಯಿಂದ ಗೋದಾವರಿವರೆಗೆ ವಿಸ್ತಾರವಾಗಿ ಹರಡಿದ್ದ ನಾಡು ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದೆ. ಸಾಮ್ರಾಟ ಅಶೋಕ ಹಾಗೂ ಶಾತವಾಹನರ ಆಳ್ವಿಕೆಯಲ್ಲಿಯೂ ಕನ್ನಡ ಭಾಷೆಯ ಬಳಕೆಯನ್ನು ಕಾಣಬಹುದು. ರಾಜ ಮನೆತನಗಳಾದ ಕದಂಬ, ಗಂಗರು, ಚಾಲುಕ್ಯ, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರದ ಅರಸರು ಮತ್ತು ಮೈಸೂರು ಒಡೆಯರ ಕಾಲದಲ್ಲಿ ಕನ್ನಡ ಭಾಷೆಯು ಸಾಹಿತ್ಯಿಕವಾಗಿ ಹಾಗೂ ಜನಮನದ ಭಾಷೆಯಾಗಿ ಹುಲುಸಾಗಿ ಬೆಳೆದು ಬಂದಿತು ಎಂದು ತಿಳಿಸಿದರು.

ಕಳೆದ 5 ದಶಕಗಳಲ್ಲಿ ರಾಜ್ಯದ ಬೆಳವಣಿಗೆಯನ್ನು ಅವಲೋಕಿಸಿದರೆ ಆಡಳಿತ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ, ವಿಜ್ಞಾನ, ಲಲಿತಕಲೆ, ಜಾನಪದ, ಕೃಷಿ, ನೀರಾವರಿ, ಪ್ರವಾಸೋದ್ಯಮ, ತಂತ್ರಜ್ಞಾನ, ಕೈಗಾರಿಕೆ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುವ ಮೂಲಕ ಅಂತರರಾಷ್ಟ್ರೀಯ ಮನ್ನಣೆ ಪಡೆಯಲಾಗಿದೆ. ನಾಡು ಹಲವು ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದುತ್ತಿದ್ದು ಈಗಿನ ಯುವ ಜನರಿಗೆ ಪ್ರೇರಣಾದಾಯಕವಾಗಿದೆ. ಅವರೂ ಸಹ ಕನ್ನಡ ನಾಡಿನ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡು ರಚನಾತ್ಮಕ ಸಾಧನೆಗಳನ್ನು ಮಾಡುವಂತಾಗಲಿ ಎಂದು ತಮ್ಮ ಆಶಯ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಕೆ.ಎಸ್.ಬಸವಂತಪ್ಪ, ಮೇಯರ್ ಚಮನ್ ಸಾಬ್.ಕೆ, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪ ಮೇಯರ್ ಸೋಗಿ ಶಾಂತಕುಮಾರ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿ.ಪಂ ಸಿಇಒ ಸುರೇಶ್ ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್ ಹಾಗೂ ಇನ್ನಿತರೆ ಗಣ್ಯರು ಭಾಗವಹಿಸಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment