ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ಸಿಎಂ ಪರಿಶೀಲನೆ ಭರವಸೆ: ಎಸ್. ಎಸ್. ಮಲ್ಲಿಕಾರ್ಜುನ್

On: January 5, 2025 6:46 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-01-2025

ದಾವಣಗೆರೆ: ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸುವಂತೆ ಕಸಾಪ ಸದಸ್ಯರು ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಬಾಪೂಜಿ ಎಂಬಿಎ ಮೈದಾನದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಯುವ ಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಪ್ರಥಮವಾಗಿ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. 2 ದಶಕಗಳ ತರುವಾಯ ಮತ್ತೊಮ್ಮೆ ರಾಜ್ಯಮಟ್ಟದ ಯುವಜನೋತ್ಸವ ಆಯೋಜಿಸಿರುವುದು ಸಂತಸ ತಂದಿದೆ. ಕ್ರೀಡಾ ಸಚಿವನಾಗಿದ್ದಾಗ ದಾವಣಗೆರೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಕೋಳ, ಟೆನ್ನಿಸ್, ಬಾಸ್ಕೆಟ್‍ಬಾಲ್ ಕ್ರೀಡಾಂಗಣಗಳನ್ನು ನಿರ್ಮಿಸಿದ್ದೆ. ಸದ್ಯ ರಾಜ್ಯ ಸರ್ಕಾರದಿಂದ ಸಂಸದ ನೆರವಿನಿಂದ ಕ್ರೀಡಾ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಜೆ.ಹೆಚ್.ಪಾಟೀಲ್ ನಗರದಲ್ಲಿ ಕ್ರಿಕೇಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿವೆ. ದಾವಣಗೆರೆ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ 5802 ಯುವಜನರಿಗೆ ರೂ.8.5 ಕೋಟಿ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದು ತಿಳಿಸಿದರು.

ದೇಶದ ಜನಸಂಖ್ಯೆಯಲ್ಲಿ ಶೇ.35 ರಷ್ಟು ಯುವಜನರಿದ್ದಾರೆ. ಕೆಲ ದುಷ್ಟ ಶಕ್ತಿಗಳು ಸಾಮಾಜಿಕ ಜಾಲತಾಣ ಮೂಲಕ ದೇಶದ ಯುವ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಯುವ ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ಒರೆಗೆ ಹಚ್ಚಿ, ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ದ್ವೇಷವನ್ನು ಬಿತ್ತುವ ವಿಚಾರ ಹಾಗೂ ಸಮೂಹ ಸನ್ನಿಯಿಂದ ದೂರವಿರಬೇಕು. ದೇಶದ ಬಹುತ್ವ ಅರ್ಥೈಸಿಕೊಳ್ಳಬೇಕು ಎಂದು ಯುವಕರಿಗೆ ಸಲಹೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment