Home ದಾವಣಗೆರೆ ಕಾಂಗ್ರೆಸ್ ಪಕ್ಷದ ಅನ್ನ ತಿಂದಿರ್ತೀರಾ, ನಮ್ಮವರೇ ಹಿಂದಿಂದ ಚಾಕು ಹಾಕೋದು ಇದಾಗಬಾರದು: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಎಚ್ಚರಿಕೆ!
ದಾವಣಗೆರೆಬೆಂಗಳೂರು

ಕಾಂಗ್ರೆಸ್ ಪಕ್ಷದ ಅನ್ನ ತಿಂದಿರ್ತೀರಾ, ನಮ್ಮವರೇ ಹಿಂದಿಂದ ಚಾಕು ಹಾಕೋದು ಇದಾಗಬಾರದು: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಎಚ್ಚರಿಕೆ!

Share
ಕಾಂಗ್ರೆಸ್
Share

ದಾವಣಗೆರೆ: ಕಾಂಗ್ರೆಸ್ ಪಕ್ಷದ ಮೂಲಕ ಅಧಿಕಾರ ಮತ್ತು ಸೌಲಭ್ಯಗಳನ್ನು ಅನುಭವಿಸಿ, ಕೊನೆಗೆ ಪಕ್ಷದವರೇ ಬೆನ್ನಿಗೆ ಚಾಕು ಹಾಕುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳುವಂತೆ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದಾವಣಗೆರೆಯ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಇಬ್ರಾಹಿಂ ಖಲೀಲ್ ಉಲ್ಲಾ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ನಾನಾ ರೀತಿಯ ತಂತ್ರಗಾರಿಕೆಗಳನ್ನು ನಾವು ನೋಡಿದ್ದೇವೆ. ಪಕ್ಷದ ಅನ್ನ ತಿಂದವರು ಪಕ್ಷದ ಹಿತ ಕಾಯಬೇಕು ಹೊರತು ಒಳೇಟು ನೀಡಬಾರದು ಎಂದು ಕಟುವಾಗಿ ನುಡಿದರು. ಉಪಚುನಾವಣೆಯಲ್ಲಿ ಸಮರ್ಥ್ ಶಾಮನೂರು ಅವರ ಗೆಲುವಿಗಾಗಿ ಶ್ರಮಿಸಿದ ರಿಜ್ವಾನ್ ಅರ್ಷದ್, ಇಬ್ರಾಹಿಂ ಹಾಗೂ ಸ್ಥಳೀಯ ಹಾಗೂ ಬೆಂಗಳೂರಿನ ಎಲ್ಲ ನಾಯಕರ ಕಾರ್ಯವನ್ನು ಸಚಿವರು ಶ್ಲಾಘಿಸಿದರು.

ಪಕ್ಷದ ನಿಷ್ಠೆಗೆ ಒತ್ತು: ಕಾಂಗ್ರೆಸ್ ಪಕ್ಷದ ಪರವಾಗಿ ಅಧಿಕಾರ ಅನುಭವಿಸುವವರು ಪಕ್ಷಕ್ಕೆ ಪ್ರಾಮಾಣಿಕರಾಗಿರಬೇಕು. ಶಿಸ್ತು ಅಳವಡಿಸಿಕೊಂಡರೆ ಯಾರೂ ಪಕ್ಷಕ್ಕೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ್ ತಿಳಿಸಿದರು.

ಸ್ವಯಂಕೃತ ಅಪರಾಧಗಳ ಎಚ್ಚರಿಕೆ: ನಮ್ಮವರೇ ಹಿಂದಿಂದ ಚಾಕು ಹಾಕುವುದು ಸರಿಯಲ್ಲ. ಮುಂಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಮರ್ಥ್ ಶಾಮನೂರು ಗೆಲುವಿನ ಮೆಚ್ಚುಗೆ: ಉಪಚುನಾವಣೆಯಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದ್ದರಿಂದಲೇ ಸಮರ್ಥ್ ಶಾಮನೂರು ಭರ್ಜರಿ ಜಯ ಸಾಧಿಸಲು ಸಾಧ್ಯವಾಯಿತು ಎಂದು ಅವರು ಸ್ಮರಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

Share

Leave a comment

Leave a Reply

Your email address will not be published. Required fields are marked *

Related Articles