Home ದಾವಣಗೆರೆ 2,536 ಹುದ್ದೆಗಳಿಗೆ ಅರ್ಜಿ ಆಹ್ವಾನ: PUC ಪಾಸಾದವರಿಗೆ ಕೇಂದ್ರ ಸರ್ಕಾರಿ ನೌಕರಿ!
ದಾವಣಗೆರೆಉದ್ಯೋಗ ವಾರ್ತೆನವದೆಹಲಿಬೆಂಗಳೂರು

2,536 ಹುದ್ದೆಗಳಿಗೆ ಅರ್ಜಿ ಆಹ್ವಾನ: PUC ಪಾಸಾದವರಿಗೆ ಕೇಂದ್ರ ಸರ್ಕಾರಿ ನೌಕರಿ!

Share
ಕೇಂದ್ರ
Share

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC) ದೇಶದ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಲೋವರ್‌ ಡಿವಿಷನ್‌ ಕ್ಲರ್ಕ್‌ (LDC), ಜೂನಿಯರ್‌ ಸೆಕ್ರಟರಿಯೇಟ್‌ ಅಸಿಸ್ಟಂಟ್‌ (JSA) ಮತ್ತು ಡೇಟಾ ಎಂಟ್ರಿ ಆಪರೇಟರ್‌ (DEO) ಸೇರಿದಂತೆ ಒಟ್ಟು 2,536 ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 7, 2026 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತ ಸರ್ಕಾರದ ಯಾವುದೇ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ 

  • ಕನಿಷ್ಠ ವಯಸ್ಸು: 18 ವರ್ಷಗಳು

  • ಗರಿಷ್ಠ ವಯಸ್ಸು: 27 ವರ್ಷಗಳು (ಆಗಸ್ಟ್ 1, 2026ರ ಆಧಾರದ ಮೇಲೆ)

  • ಸರ್ಕಾರದ ನಿಯಮಾನುಸಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ

  • LDC / JSA ಹುದ್ದೆಗಳು: ರೂ. 19,900 – 63,200/- (ಪೇ-ಲೆವೆಲ್ 2)

  • DEO ಹುದ್ದೆಗಳು: ರೂ. 25,500 – 92,300/- (ಪೇ-ಲೆವೆಲ್ 4 ಮತ್ತು 5)

ಅರ್ಜಿ ಶುಲ್ಕ

  • ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ: ರೂ. 100/-

  • ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ: ಯಾವೂದೇ ಶುಲ್ಕವಿರುವುದಿಲ್ಲ (Nil)

ಪ್ರಮುಖ ದಿನಾಂಕಗಳು 

  • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಸೆಪ್ಟೆಂಬರ್ 07, 2026

  • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 07, 2026 (ರಾತ್ರಿ 11:00 ಗಂಟೆ)

  • ಅರ್ಜಿ ತಿದ್ದುಪಡಿ (Correction Window): ಅಕ್ಟೋಬರ್ 14 ರಿಂದ 16, 2026

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡಿ ಹೊಸ ಒಟಿಆರ್ (OTR) ನೋಂದಣಿ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles