ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮಾ.25ರಿಂದ ಏಪ್ರಿಲ್ 6ರವರೆಗೆ ಎಸ್ ಎಸ್ ಎಲ್ ಸಿ – ಮಾ.1ರಿಂದ 22ರವರೆಗೆ ದ್ವಿತೀಯ ಪಿಯುಸಿ ಎಕ್ಸಾಂ: ಯಾವ್ಯಾವ ದಿನ ಯಾವ್ಯಾವ ವಿಷಯಗಳ ಪರೀಕ್ಷೆ ಡೀಟೈಲ್ಸ್ ಇಲ್ಲಿದೆ

On: February 20, 2024 9:53 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-02-2024

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.

ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.

ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.

ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

  • SSLC ಪರೀಕ್ಷೆಯ ವೇಳಾಪಟ್ಟಿ ದಿನಾಂಕ
  • 25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ
  • -ಕನ್ನಡ,ತೆಲುಗು ,ಹಿಂದಿ,ಮರಾಠಿ, ತಮಿಳು,ಉರ್ದು,ಇಂಗ್ಲಿಷ್, +ಇಂಗ್ಲಿಷ್NCERT)
  • 27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ
  • 30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ
  • 02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ
  • 03-04-2024 ಅರ್ಥಶಾಸ್ತ್ರ ಪರೀಕ್ಷೆ
  • ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ನಡೆಯಲಿರೋ ಪರೀಕ್ಷೆ.

 

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ

  • 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
  • 04-03-2024 ಸೋಮವಾರ ಗಣಿತ ಪರೀಕ್ಷೆ
  • 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
  • 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
  • 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
  • 09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
  • 11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
  • 13-03-2024 ರಂದು ಇಂಗ್ಲಿಷ್ ಪರೀಕ್ಷೆ
  • 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
  • 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
  • 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
  • 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
  • 22-03-2024 ರಂದು ಹಿಂದಿ ಪರೀಕ್ಷೆ
  • ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ

ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment