ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

On: July 23, 2025 5:16 PM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/ DAVANAGERE/ DATE:23_07_2025

ಬೆಂಗಳೂರು: ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

READ ALSO THIS STORY: ಅಫ್ರಿದಿ ಜೊತೆ ಅಜಯ್ ದೇವಗನ್ ಫೋಟೋಗಳು ವೈರಲ್: “ಭಾರತಕ್ಕಾಗಿ ಸೈನಿಕರು ಸಾಯಬೇಕೇ?” ಭಾರತೀಯರ ರೋಷಾವೇಷ!

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಾಗೂ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಭೆ ಮುಖ್ಯಾಂಶಗಳು:

  1. ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.
  2. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ.
  3. ʻಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ
    ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
  4. ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ
  5. ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.
  6. ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
  7. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment